ಬಂಟ್ವಾಳದ ಮಹಿಳೆ ಡಿಸ್ಚಾರ್ಜ್, ಇವತ್ತು ದ.ಕ.ಜಿಲ್ಲೆಯಲ್ಲಿ ಯಾವುದೇ ಕೋವಿಡ್ ಪ್ರಕರಣವಿಲ್ಲ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇವತ್ತು ಯಾವುದೇ ಕೋವಿಡ್ ಕೇಸ್ ಪಾಸಿಟಿವ್ ಎಂದು ನಮೂದಾಗಿಲ್ಲ. ಸೋಮವಾರ ಬಂಟ್ವಾಳದ 33 ವರ್ಷದ ಮಹಿಳೆ (ಪಿ-489) ಗುಣಮುಖರಾಗಿದ್ದು, ವೆನ್ಲಾಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇವರು ಬಂಟ್ವಾಳ ಕಸ್ಬಾ ಗ್ರಾಮದಲ್ಲಿ ಕೋವಿಡ್ ಗೆ ದಾಖಲಾಗಿ ಮೃತಪಟ್ಟ ಮಹಿಳೆಯ ಮಗಳು. ಸೋಮವಾರದ ವರದಿಯಂತೆ ವೆನ್ಲಾಕ್ ಆಸ್ಪತ್ರೆಯಲ್ಲಿ 14 ರೋಗಿಗಳು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು 12 ರೋಗಿಗಳ ಸ್ಥಿತಿ ತೃಪ್ತಿಕರವಾಗಿದೆ. ಕುಲಶೇಖರದ 80 ವರ್ಷದ ವೃದ್ಧೆ ಅಧಿಕ ರಕ್ತದೊತ್ತಡ, ಪಾರ್ಶ್ವವಾಯುವಿನಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿತಿ ನಾಜೂಕಾಗಿದ್ದರೆ, ಬೋಳೂರು ನಿವಾಸಿ 58ರ ಮಹಿಳೆ ಮೆದುಳಿನ ಸೋಂಕಿನಿಂದ ಬಳಲುತ್ತಿದ್ದು ಐಸಿಯುನಲ್ಲಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಜಾಹೀರಾತು

ಜಿಲ್ಲೆಯ ವಿವರ ಹೀಗಿದೆ:

ಸೋಮವಾಋ 124 ಮಂದಿಯ ವರದಿಗಳು ಬಂದಿದ್ದು ಎಲ್ಲವೂ ನೆಗೆಟಿವ್ ಆಗಿದೆ. 68 ಮಂದಿಯ ವರದಿಯನ್ನು ಕಳಿಸಲಾಗಿದೆ. ಒಟ್ಟು 128 ಮಂದಿ ವರದಿ ಬರಲು ಬಾಕಿ ಇದೆ. ದಕ್ಷಿಣ ಕನ್ನಡ ಜಿಲ್ಲೆಯ 14 ಮಂದಿ ಇದುವರೆಗೆ ಗುಣಮುಖರಾಗಿದ್ದಾರೆ. 3 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 31 ಪಾಸಿಟಿವ್ ಪ್ರಕರಣಗಳು ಇದುವರೆಗೆ ಬಂದಿದ್ದು, ಇವರ ಪೈಕಿ 6 ಮಂದಿ ಅನ್ಯರಾಜ್ಯ, ಜಿಲ್ಲೆಯವರು.

ರಾಜ್ಯದ ವಿವರ ಹೀಗಿದೆ:

ಜಾಹೀರಾತು

ರಾಜ್ಯದಲ್ಲಿ ಒಟ್ಟು 14 ಸೋಂಕಿತರು ಇವತ್ತು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 862ಕ್ಕೆ ಏರಿದೆ. ಹೊಸ ಜಾಗಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿರುವುದು ಆತಂಕಕಾರಿವಿಷಯ. ವಿವರ ಹೀಗಿದೆ. ದಾವಣಗೆರೆ  03, ಬಾಗಲಕೋಟೆ 02,ಬೀದರ್ 02, ಬೆಂಗಳೂರು 02, ಹಾವೇರಿ 01, ಕಲಬುರ್ಗಿ 01, ವಿಜಯಪುರ      01, ಹಾಸನ  01, ಮಂಡ್ಯ  01

ಬಂಟ್ವಾಳ ತಾಲೂಕಿನ ವಿವರ ಹೀಗಿದೆ:

ಬಂಟ್ವಾಳ ತಾಲೂಕಿನಲ್ಲಿ ಒಟ್ಟು ಸೋಂಕಿತರ ಪೈಕಿ 3 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.  3 ಮಂದಿ ಮೃತಪಟ್ಟಿದ್ದಾರೆ. ಒಂದು ಮನೆಯ 4, ಮತ್ತೊಂದು ಮನೆಯ 1 ಸೇರಿ ಬಂಟ್ವಾಳದಲ್ಲಿ 5 ಮಂದಿ, ನರಿಕೊಂಬಿನ ಒಬ್ಬರು ಒಟ್ಟು 6 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಾಹೀರಾತು

ಇತರ ಸುದ್ದಿಗಳಿಗೆ ಈ ವಾಟ್ಸಾಪ್ ಗುಂಪಿಗೆ ಸೇರಬಹುದು. ಕ್ಲಿಕ್ ಮಾಡಿ ಸೇರಿ

https://chat.whatsapp.com/HEamC5PR5BQ1pNoRgq3yx4

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳದ ಮಹಿಳೆ ಡಿಸ್ಚಾರ್ಜ್, ಇವತ್ತು ದ.ಕ.ಜಿಲ್ಲೆಯಲ್ಲಿ ಯಾವುದೇ ಕೋವಿಡ್ ಪ್ರಕರಣವಿಲ್ಲ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*