ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದಲ್ಲಿ ಭಾನುವಾರ ಕರ್ತವ್ಯನಿರತ ಆಶಾ ಕಾರ್ಯಕರ್ತೆಯೊಬ್ಬರನ್ನು ನಿಂದಿಸಿ ಹಲ್ಲೆಗೆ ಯತ್ನಿಸಿರುವ ಕುರಿತು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.
ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ಮೂಲಕ ಕುಕ್ಕಿಪ್ಪಾಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆ ಪುಷ್ಪಲತಾ ಎಂಬವರು ಸ್ಥಳೀಯ ಮನೆಯೊಂದರಲ್ಲಿ ಜನ ಸೇರಿರುವುದನ್ನು ಪ್ರಶ್ನಿಸುತ್ತಿದ್ದ ಸಂದರ್ಭ ನಿಂದಿಸಿ, ಪೊರಕೆಯಲ್ಲಿ ಹಲ್ಲೆ ನಡೆಸುವ ಬೆದರಿಕೆ ಒಡ್ಡಿರುವುದಾಗಿ ಕುಕ್ಕಿಪ್ಪಾಡಿ ಗ್ರಾಮದ, ಅಭ್ಯಂತ್ ಎಂಬಲ್ಲಿ ವಾಸ್ತವ್ಯವಿರುವ ವಿಶ್ವನಾಥ ಆಚಾರ್ಯ ಮತ್ತು ಶ್ರೀಮತಿ ಆಚಾರ್ಯ ವಿರುದ್ಧ ಸೋಮವಾರ ದೂರು ನೀಡಿದ್ದಾರೆ. ಈ ಕುರಿತು ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಕಲಂ .504.506. IPC & 5(2) ಕರ್ನಾಟಕ ಸಾಂಕ್ರಾಮಿಕ ರೋಗಗಳ ಅದ್ಯಾದೇಶ 2020 ರಂತೆ ಪ್ರಕರಣ ದಾಖಲಾಗಿರುತ್ತದೆ. ಘಟನೆ ಹಿನ್ನೆಲೆಯಲ್ಲಿ ಸೋಮವಾರ ತುರ್ತು ಸಭೆ ನಡೆಸಿದ ಗ್ರಾಪಂ ಅಧ್ಯಕ್ಷ ದಿನೇಶ ಸುಂದರ ಶಾಂತಿ ನೇತೃತ್ವದ ಟಾಸ್ಕ್ ಫೋರ್ಸ್ ಸಮಿತಿ ಘಟನೆ ಕುರಿತು ತನಿಖೆ ನಡೆಸಿ, ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಪುಂಜಾಲಕಟ್ಟೆ ಪೊಲೀಸರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
ಇತರ ಸುದ್ದಿಗಳಿಗೆ ಈ ವಾಟ್ಸಾಪ್ ಗುಂಪಿಗೆ ಸೇರಬಹುದು. ಕ್ಲಿಕ್ ಮಾಡಿ ಸೇರಿ