ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಎಂಬಲ್ಲಿ ಕಸದ ರಾಶಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದರು. ಸೋಮವಾರ ರಾತ್ರಿ ಸುಮಾರು 8 ಗಂಟೆ ವೇಳೆ ಘಟನೆ ನಡೆದಿದ್ದು, ಪಾಣೆಮಂಗಳೂರು ಹಳೇ ಸೇತುವೆ ಸಮೀಪ ಇರುವ ಕಸದ ರಾಶಿಗೆ ಬೆಂಕಿ ತಗಲಿದೆ. ಇದು ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರಬಹುದೇ ಅಥವಾ ಬೇರೇನಾದರೂ ಕಾರಣ ಇರಬಹುದೇ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…