ಬಂಟ್ವಾಳ

ಶರತ್ ಮಡಿವಾಳ ಜನ್ಮದಿನಾಚರಣೆ: ಅಶಕ್ತ ರೋಗಿಗಳಿಗೆ ಅಗತ್ಯ ಔಷಧ ವಿತರಣೆ

ಜಾಹೀರಾತು

ದುಷ್ಕರ್ಮಿಗಳಿಂದ ಬಿ.ಸಿ.ರೋಡ್ ನಲ್ಲಿ ಹತ್ಯೆಗೀಡಾಗಿದ್ದ ಶರತ್ ಮಡಿವಾಳ ಅವರ ಜನ್ಮದಿನಾಚರಣೆಯನ್ನು ಬಂಟ್ವಾಳ ತಾಲೂಕಿನ ಸಜೀಪದಲ್ಲಿರುವ ಅವರ ಮನೆಯಲ್ಲಿರುವ ಸ್ಮಾರಕ ಪೀಠಕ್ಕೆ ಪುಷ್ಪನಮನ ಸಲ್ಲಿಸುವುದರ ಮೂಲಕ ಆಚರಿಸಲಾಯಿತು.

ಈ ವೇಳೆ ಸಜೀಪ ಜನಸೇವಾ ಟ್ರಸ್ಟ್ ಅಧ್ಯಕ್ಷ ಯಶವಂತ ದೇರಾಜೆ, ಬೂಡ ಸದಸ್ಯ ಸಚಿನ್ ಮೆಲ್ಕಾರ್, ವಿಟ್ಲ ಪ್ರಖಂಡ ವಿಶ್ವ ಹಿಂದೂ ಪರಿಷತ್ ಮುಖಂಡ ಲೋಹಿತ್ ಪಣೋಲಿಬೈಲು, ಅರುಣ್ ಕುಮಾರ್ ಕುಕ್ಕುದಕಟ್ಟೆ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಗಣೇಶ್ ಕಾರಾಜೆ, ಭಜರಂಗದಳದ ರತನ್ ಬೊಳ್ಳಾಯಿ, ಮನೋಹರ ಕರ್ಕೇರಾ, ಸಂತೋಷ್ ಮರ್ತಾಜೆ, ರಂಜಿತ್ ಪೂಜಾರಿ ಕುದ್ರೆಬೆಟ್ಟು, ಶರತ್ ಮಡಿವಾಳ ತಂದೆ ತನಿಯಪ್ಪ ಮಡಿವಾಳ ಮತ್ತು ಕುಟುಂಬದವರು, ಆರೆಸ್ಸೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.ಬಳಿಕ ‌ಸಜೀಪ ನಾಲ್ಕು ಗ್ರಾಮದಲ್ಲಿ ಕಾಯಿಲೆಯಿಂದ ಬಳಲುತ್ತಿರುವ ಕೆಲವು ಅಶಕ್ತ ಕುಟುಂಬದ ಸದಸ್ಯರಿಗೆ ಯಶವಂತ ದೇರಾಜೆ, ಸಚಿನ್ ಮೆಲ್ಕಾರ್, ಲೋಹಿತ್ ಪಣೋಲಿಬೈಲು ತೃತ್ವದಲ್ಲಿ ಅಗತ್ಯ ಔಷಧಗಳನ್ನು ಉಚಿತವಾಗಿ ವಿತರಿಸಲಾಯಿತು.

ಇತರ ಸುದ್ದಿಗಳಿಗೆ ಈ ವಾಟ್ಸಾಪ್ ಗುಂಪಿಗೆ ಸೇರಬಹುದು. ಕ್ಲಿಕ್ ಮಾಡಿ ಸೇರಿ

https://chat.whatsapp.com/HEamC5PR5BQ1pNoRgq3yx4

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

55 minutes ago