ಜಿಲ್ಲಾ ಸುದ್ದಿ

ದುಬೈನಿಂದ ಮಂಗಳೂರು ಏರ್ ಪೋರ್ಟ್ ಗೆ ಬಂದ ವಿಮಾನ, ತಾಯ್ನಾಡಿಗೆ ಮರಳಿದ 176 ಪ್ರಯಾಣಿಕರು

ವಿವರಗಳಿಗೆ ಕ್ಲಿಕ್ ಮಾಡಿರಿ

ಇತರ ಸುದ್ದಿಗಳಿಗೆ ಈ ವಾಟ್ಸಾಪ್ ಗುಂಪಿಗೆ ಸೇರಬಹುದು. ಕ್ಲಿಕ್ ಮಾಡಿರಿ 

ಜಾಹೀರಾತು

https://chat.whatsapp.com/HEamC5PR5BQ1pNoRgq3yx4

ಲಾಕ್ ಡೌನ್ ಬಳಿಕ‌ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಮೊದಲ ವಿಮಾನ ಮಂಗಳವಾರ ರಾತ್ರಿ ಬಂದಿಳಿಯಿತು.

ಯುನೈಟೆಡ್ ಅರಬ್ ಎಮಿರೇಟ್ಸ್ ನಿಂದ ಸುಮಾರು 176 ಪ್ರಯಾಣಿಕರನ್ನು ಹೊತ್ತು ತಂದ ವಿಮಾನ ರಾತ್ರಿ 10.10 ಕ್ಕೆ ಲ್ಯಾಂಡ್‌ ಆಯಿತು.
ಪ್ರಯಾಣಿಕರಿಗೆ ಇಳಿದ ನಂತರ ವಿಮಾನ ನಿಲ್ದಾಣದಲ್ಲಿ ಹಣ ವರ್ಗಾವಣೆ, ಸಿಮ್ ವಿತರಣೆ, ಆರೋಗ್ಯ ಕಿಟ್ ವಿತರಣೆ, ಉಪಹಾರ ವ್ಯವಸ್ಥೆ ಮಾಡಲಾಯಿತು. ನಂತರ ಆರೋಗ್ಯ ಇಲಾಖೆಯ ತಪಾಸಣಾ ತಂಡದಿಂದ ಪ್ರತೀ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಲಾಯಿತು. ಪ್ರಯಾಣಿಕರಿಗೆ ಸ್ಟಾಂಪಿಂಗ್ ಮಾಡಿ, ಇಮಿಗ್ರೇಷನ್ ಪ್ರಕ್ರಿಯೆ ನಡೆಸಲಾಯಿತು.

ವಿಮಾನ ಆಗಮನ ಸಂದರ್ಭ ಪ್ರೊಬೇಷನರಿ ಐಎಎಸ್ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ.‌ರಾಮಚಂದ್ರ ಬಾಯರಿ, ವಿಮಾನ ನಿಲ್ದಾಣ ನಿರ್ದೇಶಕ ವಿ.ವಿ. ರಾವ್, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts