ಇತರ ಸುದ್ದಿಗಳಿಗೆ ಈ ವಾಟ್ಸಾಪ್ ಗುಂಪಿಗೆ ಸೇರಬಹುದು. ಕ್ಲಿಕ್ ಮಾಡಿರಿ
https://chat.whatsapp.com/HEamC5PR5BQ1pNoRgq3yx4
ಪ್ರತ್ಯೇಕ ಪ್ರಕರಣಗಳಲ್ಲಿ ಕಳೆದ ದಿನದಿಂದೀಚೆಗೆ ಇಬ್ಬರು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ಬಿ.ಕಸ್ಬಾದ ನಿವಾಸಿ ಸಂಜೀವ ಗೌಡ (70) ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದು, ಬಂಟ್ವಾಳ ಆಸ್ಪತ್ರೆಗೆ ದಾಖಲಿಸಿ ಮಂಗಳೂರಿಗೆ ಕರೆದೊಯ್ಯುವ ಸಂದರ್ಭ ಮೃತಪಟ್ಟಿದ್ದಾರೆ.
ಮೇಲ್ಕಾರಿನ ಖಾಸಗಿ ಸಂಸ್ಥೆಯೊಂದರಲ್ಲಿ ಪ್ಲೈವುಡ್ ಕೆಲಸಕ್ಕೆಂದು ಬಂದಿದ್ದ ಓಡಿಸಾ ಮೂಲದ ಲಕ್ಷ್ಮೀಧರ ಜಿನ (36) ಅವರಿಗೆ ಸೋಮವಾರ ರಾತ್ರಿ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ. ಎರಡೂ ಪ್ರಕರಣಗಳು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿವೆ.
Be the first to comment on "ಪ್ರತ್ಯೇಕ ಪ್ರಕರಣ: ಅನಾರೋಗ್ಯದಿಂದ ಇಬ್ಬರ ಸಾವು"