ಬಂಟ್ವಾಳ

ಪ್ರತ್ಯೇಕ ಪ್ರಕರಣ: ಅನಾರೋಗ್ಯದಿಂದ ಇಬ್ಬರ ಸಾವು

ಇತರ ಸುದ್ದಿಗಳಿಗೆ ಈ ವಾಟ್ಸಾಪ್ ಗುಂಪಿಗೆ ಸೇರಬಹುದು. ಕ್ಲಿಕ್ ಮಾಡಿರಿ 

https://chat.whatsapp.com/HEamC5PR5BQ1pNoRgq3yx4

ಪ್ರತ್ಯೇಕ ಪ್ರಕರಣಗಳಲ್ಲಿ ಕಳೆದ ದಿನದಿಂದೀಚೆಗೆ ಇಬ್ಬರು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ಬಿ.ಕಸ್ಬಾದ  ನಿವಾಸಿ ಸಂಜೀವ ಗೌಡ (70) ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದು, ಬಂಟ್ವಾಳ ಆಸ್ಪತ್ರೆಗೆ ದಾಖಲಿಸಿ ಮಂಗಳೂರಿಗೆ ಕರೆದೊಯ್ಯುವ ಸಂದರ್ಭ ಮೃತಪಟ್ಟಿದ್ದಾರೆ.

ಮೇಲ್ಕಾರಿನ ಖಾಸಗಿ ಸಂಸ್ಥೆಯೊಂದರಲ್ಲಿ ಪ್ಲೈವುಡ್ ಕೆಲಸಕ್ಕೆಂದು ಬಂದಿದ್ದ ಓಡಿಸಾ ಮೂಲದ ಲಕ್ಷ್ಮೀಧರ ಜಿನ (36) ಅವರಿಗೆ ಸೋಮವಾರ ರಾತ್ರಿ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ. ಎರಡೂ ಪ್ರಕರಣಗಳು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿವೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts