ಮಂಗಳೂರಿನ ಬೋಳೂರು ನಿವಾಸಿ,58 ವರ್ಷದ ಮಹಿಳೆ ಬುಧವಾರ ಮಧ್ಯಾಹ್ನ ಸಾವನ್ನಪ್ಪಿದ್ದಾರೆ. ಮೆದುಳು ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆಗೆ ಏ.30ರಂದು ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಮಂಗಳೂರಿನ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಕಳೆದ ಕೆಲ ದಿನಗಳಿಂದ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದರು.
ಇದರೊಂದಿಗೆ ಮಂಗಳೂರು ನಗರದಲ್ಲಿ ಕೊರೊನಾಗೆ ಮೊದಲ ಬಲಿಯಾದರೆ, ಒಟ್ಟಾರೆಯಾಗಿ ಜಿಲ್ಲೆಯಲ್ಲಿ ನಾಲ್ವರು ಮೃತಪಟ್ಟಂತಾಗಿದೆ. ಮೊದಲ ಮೂವರು ಬಂಟ್ವಾಳ ಕಸಬಾ ಗ್ರಾಮದ ಬಂಟ್ವಾಳ ಪೇಟೆಯ ಅಕ್ಕಪಕ್ಕದ ನಿವಾಸಿಗಳೂ ಸಂಬಂಧಿಕರೂ ಆಗಿದ್ದರು. ಮೃತಪಟ್ಟವರೆಲ್ಲರೂ ಮಹಿಳೆಯರೇ ಆಗಿದ್ದಾರೆ.