ಬಂಟ್ವಾಳ ತಾಲೂಕಿನ ಮತ್ತೋರ್ವ ಮಹಿಳೆ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ನರಿಕೊಂಬು ಗ್ರಾಮದ ನಾಯಿಲ ನಿವಾಸಿ 47 ವರ್ಷದ ಮಹಿಳೆ ಕಳೆದ ಏಪ್ರಿಲ್ 26ರಂದು ಕೊರೊನಾ ಸೋಂಕು ದೃಢಪಟ್ಟು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರು ಗುಣಮುಖರಾಗಿದ್ದು ಡಿಸ್ಚಾರ್ಜ್ ಆಗಿದ್ದಾರೆ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಬಂಟ್ವಾಳ ಕಸ್ಬಾ ಗ್ರಾಮಕ್ಕೊಳಪಡುವ ಬಂಟ್ವಾಳ ಪೇಟೆ ನಿವಾಸಿ 33 ವರ್ಷದ ಮಹಿಳೆ ಗುಣಮುಖರಾಗಿದ್ದು, ಇದೀಗ ನರಿಕೊಂಬಿನ ಮಹಿಳೆಯೂ ಗುಣಮುಖರಾದಂತಾಗಿದೆ.
ಬಂಟ್ವಾಳ ತಾಲೂಕಿನಲ್ಲಿ ಗುಣಮುಖರಾದವರ ಸಂಖ್ಯೆ ಒಟ್ಟು 4. ಮೃತಪಟ್ಟವರು 3. ಸೋಂಕಿತರು 5. ತಾಲೂಕಿನಲ್ಲಿ ಒಟ್ಟು 12 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇವರ ಪೈಕಿ ಸಜೀಪನಡು ಗ್ರಾಮದ 1, ತುಂಬೆ 1, ಬಂಟ್ವಾಳ ಪೇಟೆಯ 9 ಮತ್ತು ನರಿಕೊಂಬು ಗ್ರಾಮದ 1 ಸೇರಿದ್ದರು. ಇವರ ಪೈಕಿ ಸಜೀಪನಡು, ತುಂಬೆ, ನರಿಕೊಂಬು ಗ್ರಾಮದ ಎಲ್ಲರೂ ಗುಣಮುಖರಾದಂತಾಗಿದೆ. ಬಂಟ್ವಾಳ ಪೇಟೆಯ 9 ಮಂದಿಯಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ. ಒಬ್ಬರು ಗುಣಮುಖರಾಗಿದ್ದಾರೆ. 5 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "GOOD NEWS: ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗಿದ್ದ ನರಿಕೊಂಬು ಗ್ರಾಮದ ಮಹಿಳೆ ಡಿಸ್ಚಾರ್ಜ್"
Be the first to comment on "GOOD NEWS: ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗಿದ್ದ ನರಿಕೊಂಬು ಗ್ರಾಮದ ಮಹಿಳೆ ಡಿಸ್ಚಾರ್ಜ್"