ಕಡೇಶ್ವಾಲ್ಯ ಗ್ರಾಮದ ನಚ್ಚಿಬೆಟ್ಟು ಎಂಬಲ್ಲಿರುವ ಮನೆಯೊಂದರಲ್ಲಿ ಹಸುಗಳ ಸಹಿತ ಜಾನುವಾರುಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ಪ್ರಕರಣ ಪತ್ತೆಯಾಗಿದೆ. ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಜಾಹೀರಾತು
ನಚ್ಚಿಬೆಟ್ಟು ಎಂಬಲ್ಲಿ ಪ್ರಕರಣ ನಡೆದಿದೆ. ಅಲ್ಲಿನ ನಿವಾಸಿ ಅಬ್ದುಲ್ ರಝಾಕ್ ಹಾಗೂ ಅಬೂಬಕ್ಕರ್ ಬಂಧಿತ ಆರೋಪಿಗಳು. ಇವರಿಬ್ಬರು ಗೋಮಾಂಸ ಮಾರಾಟ ಮಾಡುತ್ತಿದ್ದುದಾಗಿ ಆರೋಪಿಸಲಾಗಿತ್ತು. ಈ ಕುರಿತು ಖಚಿತ ಮಾಹಿತಿಯ ಮೇರೆಗೆ ಬಂಟ್ವಾಳ ಗ್ರಾಮಾಂತರ ಪಿಎಸ್ಐ ಪ್ರಸನ್ನ ಹಾಗೂ ಸಿಬಂದಿ ದಾಳಿ ನಡೆಸಿದ್ದರು. ದಾಳಿಯ ವೇಳೆ ಆಟೋ ರಿಕ್ಷಾದಲ್ಲಿದ್ದ ೪೦ ಕೆಜಿ ಗೋಮಾಂಸ, ತೋಟದಲ್ಲಿ ಕಟ್ಟಿಹಾಕಿದ್ದ ೪ ಕರುಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಸಿಬಂದಿ ಜನಾರ್ದನ, ಸುರೇಶ್, ವರ್ಗೀಸ್, ಬಸವರಾಜು, ವಿಶಾಲಾಕ್ಷಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಜಾನುವಾರುಗಳನ್ನು ಕೊಂದು ಮಾಂಸ ಮಾರಾಟ ಪ್ರಕರಣ, ಇಬ್ಬರ ಬಂಧನ, ಕರುಗಳ ರಕ್ಷಣೆ"
Be the first to comment on "ಜಾನುವಾರುಗಳನ್ನು ಕೊಂದು ಮಾಂಸ ಮಾರಾಟ ಪ್ರಕರಣ, ಇಬ್ಬರ ಬಂಧನ, ಕರುಗಳ ರಕ್ಷಣೆ"