ಸಾರ್ವಜನಿಕರಿಗೆ ಎಸ್ಪಿ ಲಕ್ಷ್ಮೀಪ್ರಸಾದ್ ಹೇಳಿದ್ದೇನು? ಇಲ್ಲಿದೆ ವಿವರ:
ನಿಮ್ಮೆಲ್ಲರ ಹಿತದೃಷ್ಟಿಯಿಂದ ಕೇವಲ ನಿಗಾ ಇಡುವ ಸಲುವಾಗಿ ಕ್ವಾರಂಟೈನ್ ಮಾಡಲಾಗುತ್ತದೆಯೇ ವಿನಃ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಇಂಥ ಸಂದರ್ಭ ಯಾರಾದರೂ ಈ ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ಅಥವಾ ವಿರೋಧ ವ್ಯಕ್ತಪಡಿಸಿದಲ್ಲಿ ಅಂಥವರ ವಿರುದ್ಧ ಸಾಂಕ್ರಾಮಿಕ ತಡೆ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹೀಗೆಂದು ಪತ್ರಿಕಾ ಪ್ರಕಟಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮೀಪ್ರಸಾದ್ ಎಚ್ಚರಿಸಿದ್ದಾರೆ
ದೇಶದ ಇತರ ರಾಜ್ಯಗಳಲ್ಲಿ ನೆಲೆಸಿರುವ ಜಿಲ್ಲೆಯ ನಿಮ್ಮೂರಿನ ನಿವಾಸಿಗಳೇ ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ನಿಯಮಗಳಿಗೆ ಒಳಪಟ್ಟು ಹಿಂತಿರುಗುತ್ತಿದ್ದಾರೆ. ಸಮಾಜದ ಆರೋಗ್ಯ ಹಿತದೃಷ್ಟಿಯಲ್ಲಿ ಆಯಾಯ ಗ್ರಾಪಂ ವ್ಯಾಪ್ತಿಯ ಶಾಲೆ, ಇನ್ನಿತರ ಸಂಸ್ಥೆಗಳಲ್ಲಿ ಕ್ವಾರಂಟೈನ್ ನಲ್ಲಿಡುವ ಬಗ್ಗೆ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಆದೇಶ ಹೊರಡಿಸಿದ್ದಾರೆ. ಊರಿಗೆ ಮರಳುತ್ತಿರುವವರು ನಿಮ್ಮೂರಿನವರೇ. ಎಲ್ಲರ ಹಿತದೃಷ್ಟಿಯಿಂದ ಅವರನ್ನು ಗ್ರಾಪಂ ವ್ಯಾಪ್ತಿಯಲ್ಲೇ ಇರಿಸಿಕೊಳ್ಳಬೇಕಾದ ನಿಯಮವಿದೆ. ಎಲ್ಲ ಪ್ರಕ್ರಿಯೆಗಳಿಗೆ ಗ್ರಾಪಂ ವ್ಯಾಪ್ತಿಯ ಟಾಸ್ಕ್ ಫೋರ್ಸ್ ಸಂಪೂರ್ಣ ಸಹಕಾರ ನೀಡಲಿದೆ ಎಂದು ಹೇಳಿದ್ದಾರೆ.