ಪ್ರಮುಖ ಸುದ್ದಿಗಳು

ರಾಜ್ಯದಲ್ಲಿ ಮತ್ತೆ 54 ಹೊಸ ಪ್ರಕರಣ, ದಕ್ಷಿಣ ಕನ್ನಡದಲ್ಲಿ 2 ಪಾಸಿಟಿವ್ ಕೇಸ್

ಶನಿವಾರ ಯಾವುದೇ ಪಾಸಿಟಿವ್ ಪ್ರಕರಣಗಳು ಇರದೆ ನೆಮ್ಮದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಮತ್ತೆರಡು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದಿನ ಪತ್ತೆಯಾದ ಪ್ರಕರಣಗಳ ವಿವರ ಹೀಗಿದೆ. ಮುಂಬಯಿಯಿಂದ ಮೇ 14ರಂದು ಆಗಮಿಸಿದ 34 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ. ಮಂಗಳೂರು ತಾಲೂಕು ಜೆಪ್ಪು ಪಟ್ನ ಗ್ರಾಮ ನಿವಾಸಿಯಾದ 31 ವರ್ಷದ ಪುರುಷನಿಗೆ ಸೋಂಕು ದೃಢಪಟ್ಟಿದೆ.

ಕರ್ನಾಟಕದಲ್ಲಿ ಭಾನುವಾರ ಮಧ್ಯಾಹ್ನದ ವೇಳೆಗೆ ಒಟ್ಟು 54 ಹೊಸ ಪ್ರಕರಣಗಳು ಪತ್ತೆಯಾಗಿರುವುದು ಆತಂಕಕಾರಿ. ಇದೀಗ ಒಟ್ಟು ಪ್ರಕರಣಗಳ ಸಂಖ್ಯೆ 1146 ಆಗಿದೆ. ಇವರಲ್ಲಿ 37 ಮಂದಿ ಮೃತಪಟ್ಟಿದ್ದು, 497 ಮಂದಿ ಗುಣಮುಖರಾಗಿದ್ದಾರೆ. 611 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಪತ್ತೆಯಾಗಿರುವ ಪ್ರಕರಣಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ 2 ಮತ್ತು ಉಡುಪಿ ಜಿಲ್ಲೆಯ ಒಬ್ಬರು ಸೇರಿದ್ದಾರೆ. ಉಡುಪಿ ಜಿಲ್ಲೆಯ 54 ವರ್ಷದ ಪುರುಷ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದು, ಇವರು ಮುಂಬೈನಿಂದ ಬಂದಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯ 31 ವರ್ಷದ ಪುರುಷನ ಸಂಪರ್ಕ ಪತ್ತೆಹಚ್ಚಲಾಗುತ್ತಿದೆ. ಇನ್ನೊಬ್ಬ 35 ವರ್ಷದ ಮಹಿಳೆ ಮುಂಬೈನಿಂದ ಆಗಮಿಸಿದ್ದು, ಅವರಿಗೆ ಸೋಂಕು ಪತ್ತೆಯಾಗಿದೆ.

ಜಾಹೀರಾತು

ಉಡುಪಿ ಜಿಲ್ಲೆಯ 54 ವರ್ಷದ ಪುರುಷ ಹೃದಯ ಸಂಬಂಧಿ ತೊಂದರೆಯಿಂದ ಖಾಸಗಿ ಆಸ್ಪತ್ರೆಯಿಂದ ದಾಖಲಾಗಿದ್ದು, ಮೇ.14ರಂದು ಹೃದಯಾಘಾತದಿಂದ ಮೃತರಾಗಿದ್ದಾರೆ. ಮೇ.16ರಂದು ಇವರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು.

ಮಂಡ್ಯ 22, ಕಲಬುರ್ಗಿ 10, ಹಾಸನ 6, ದಾರವಾಡ 4, ಕೋಲಾರ 3, ಯಾದಗಿರಿ 3, ದಕ್ಷಿಣಕನ್ನಡ 2, ಶಿವಮೊಗ್ಗ 2, ಉಡುಪಿ       1, ವಿಜಯಪುರ 1 ಇಂದು ಪತ್ತೆಯಾದ ಕೊರೊನಾ ಪಾಸಿಟಿವ್ ಪ್ರಕರಣಗಳು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts