ಚಂಡಮಾರುತ ಪ್ರಭಾವದಿಂದ ಮಳೆಯಾಗುತ್ತಿದ್ದು, ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಜಾಸ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಶಂಭೂರಿನ ಏ. ಎಂ. ಆರ್, ಅಣೆಕಟ್ಟಿಗೆ ನೀರಿನ ಒಳ ಹರಿವು ಹೆಚ್ಚುತ್ತಿದ್ದು, ನೀರಿನ ಸಂಗ್ರಹದ ಗರಿಷ್ಠ ಮಟ್ಟ (18.9 ಮೀಟರ್) ತಲುಪಲು ಸೋಮವಾರ 18.1 ಮೀಟರ್ ನೀರು ಸಂಗ್ರಹವಿದೆ. ಈ ಕಾರಣದಿಂದ ಯಾವುದೇ ಕ್ಷಣದಲ್ಲಿ ನೀರನ್ನು ಹೊರಬಿಡಲಾಗುವುದರಿಂದ ನದಿ ಪಾತ್ರದ ಜನರು ಮುಂಜಾಗ್ರತೆ ವಹಿಸಬೇಕಾಗಿ ಎಎಂಆರ್ ಪ್ರಕಟಣೆಯಲ್ಲಿ ತಿಳಿಸಿದೆ.