ವೃತ್ತಿಪರ ಯಕ್ಷಗಾನ ಕಲಾವಿದರಿಗೆ ಸರಕಾರದ ಸಹಾಯಧನಕ್ಕೆ ಮನವಿ

ಯಕ್ಷಗಾನ ಮೇಳಗಳ ವ್ಯವಸ್ಥಾಪಕರ ನಿಯೋಗ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ದ.ಕ.ಸಂಸದ ನಳಿನ್‌ಕುಮಾರ್ ಕಟೀಲು ಅವರನ್ನು ಮೇ 16ರಂದು ಮಂಗಳೂರಿನಲ್ಲಿ ಭೇಟಿಯಾಗಿ ಅತಂತ್ರವಾಗಿರುವ ವೃತ್ತಿಪರ ಯಕ್ಷಗಾನ ಕಲಾವಿದರಿಗೆ ಸರಕಾರದ ಆರ್ಥಿಕ ಸಹಾಯಧನ ನೀಡುವಂತೆ ಒತ್ತಾಯಿಸಿ ಮನವಿ ನೀಡಿದೆ.

ಜಾಹೀರಾತು

ಈ ವರ್ಷದ ತಿರುಗಾಟವಿಲ್ಲದೆ ಕಲಾವಿದರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಮುಂದಿನ ವರ್ಷದ ತಿರುಗಾಟ ಆರಂಭವಾಗಬೇಕಾದರೆ ನವೆಂಬರ್‌ವರೆಗೆ ಕಾಯಬೇಕಾಗಿದ್ದು, ಆದರೆ ಪರಿಸ್ಥಿತಿ ಹೀಗೆ ಮುಂದುವರಿದರೆ ಅದು ಕೂಡ ಆರಂಭವಾಗುವುದು ಅನುಮಾನ. ಮತ್ತೊಂದೆಡೆ ಆರ್ಥಿಕ ಸಂಕಷ್ಟದಿಂದ ಸಂಘಟಕರು ಮುಂದೆ ಬರುತ್ತಾರೆಯೇ ಎಂಬುದು ಕೂಡ ಈಗಲೇ ಹೇಳುವಂತಿಲ್ಲ.
ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿರುವ ವೃತ್ತಿಪರ ಯಕ್ಷಗಾನ ಕಲಾವಿದರಿಗೆ ಸರಕಾರ ಸಹಾಯಧನ ನೀಡುವುದು ಅನಿವಾರ್ಯ ಎಂದು ಯಕ್ಷಗಾನ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ ಅವರ ನೇತೃತ್ವದಲ್ಲಿ ತೆರಳಿದ ನಿಯೋಗ ಸಚಿವರಿಗೆ ಮನವರಿಕೆ ಮಾಡಿದೆ. ವೃತ್ತಿಪರ ಕಲಾವಿದರ ಮಾಹಿತಿ ಕೇಳಿರುವುದು ಸಚಿವರು ಸರಕಾರದ ಮಟ್ಟದಲ್ಲಿ ಪರಿಹಾರ ದೊರಕಿಸಿಕೊಡುವುದಕ್ಕೆ ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ.

ಜತೆಗೆ ದ.ಕ, ಉಡುಪಿ, ಕಾಸರಗೋಡು, ಉತ್ತರಕನ್ನಡ, ಶಿವಮೊಗ್ಗ ಈ ಭಾಗದಲ್ಲಿ ಮಾತ್ರ ವೃತ್ತಿಪರ ಕಲಾವಿದರಿದ್ದು, ಅವರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಸರಕಾರಕ್ಕೆ ಒತ್ತಡ ಹೇರುವಂತೆ ಸಂಸದ ನಳಿನ್‌ಕುಮಾರ್ ಅವರಿಗೆ ನಿಯೋಗ ಒತ್ತಾಯಿಸಿದೆ.
ಯಕ್ಷಧ್ರುವ ಪಟ್ಲ ಪೌಂಢೇಶನ್ ಅಧ್ಯಕ್ಷ, ಭಾಗವತ ಸತೀಶ್ ಶೆಟ್ಟಿ ಪಟ್ಲ, ತಲಕಳ ಮೇಳದ ತಿಮ್ಮಪ್ಪ ಗುಜರನ್, ಸಸಿಹಿತ್ಲು ಮೇಳದ ದಯಾನಂದ ಗುಜರನ್, ಬಪ್ಪನಾಡು ಮೇಳದ ವಿನೋದ್‌ಕುಮಾರ್ ಬಜ್ಪೆ, ಬೆಂಕಿನಾಥೇಶ್ವರ ಮೇಳದ ಸುರೇಂದ್ರ ಮಲ್ಲಿ, ಮಂಗಳಾದೇವಿ ಯಕ್ಷಗಾನ ಮೇಳದ ಕಡಬ ದಿನೇಶ್ ರೈ, ದೇಂತಡ್ಕ ಮೇಳದ ಶ್ಯಾಮ್ ಭಟ್ ದೇಂತಡ್ಕ, ಬಾಚಕೆರೆ ಮೇಳದ ಶಶಿಧರ ಬಾಚಕೆರೆ, ಸೂಡ ಮೇಳದ ಧೀರಜ್ ರೈ ಸಂಪಾಜೆ, ತುಳುನಾಡು ಮೇಳದ ಪ್ರದೀಪ್ ಶೆಟ್ಟಿ ಕೋಡು, ಅನ್ನಪೂರ್ಣೇಶ್ವರಿ ಬನ್ನೂರು ಮೇಳದ ಗಂಗಾಧರ ಭಂಡಾರಿ, ಕಲಾವಿರಾದ ಕೋಡಪದವು ದಿನೇಶ್‌ಕುಮಾರ್, ಹರೀಶ್ ಕೊಕ್ಕಡ ಮೊದಲಾದವರು ನಿಯೋಗದಲ್ಲಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ವೃತ್ತಿಪರ ಯಕ್ಷಗಾನ ಕಲಾವಿದರಿಗೆ ಸರಕಾರದ ಸಹಾಯಧನಕ್ಕೆ ಮನವಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*