ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬೀ ಸಮುದ್ರದ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿದ್ದು, ಇದರ ಪ್ರಭಾವದಿಂದ ಕರ್ನಾಟಕದ ಕರಾವಳಿ ಭಾಗದಲ್ಲಿ ಮೇ.18 ಮತ್ತು 19ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಭಾರತೀಯ ಹವಾಮಾನ ಇಲಾಖೆ 19ರ ಬೆಳಗ್ಗೆವರೆಗೆ YELLOW ALERT ಘೋಷಿಸಿದ್ದು, 64 ಮಿ.ಮೀನಿಂದ 115 ಮಿ.ಮೀ.ವರೆಗೆ ಮಳೆ ಬೀಳುವ ಸಾಧ್ಯತೆ ಇರುತ್ತದೆ ಎಂದು ಸೂಚನೆ ನೀಡಿದ್ದಾರೆ. ಆದ್ದರಿಂದ ಸಾರ್ವಜನಿಕರು ಎಚ್ಚರದಿಂದಿರಲು ಜಿಲ್ಲಾಡಳಿತ ಮನವಿ ಮಾಡಿದೆ.
ಪ್ರಾಕೃತಿಕ ವಿಕೋಪ ಸಂಬಂಧಿಸಿದಂತೆ ತುರ್ತು ಸೇವೆಗೆ 1077ಗೆ ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಮನವಿ ಮಾಡಿದ್ದಾರೆ.
| ಪುರಸಭಾ ವ್ಯಾಪ್ತಿಯ ಜನರಲ್ಲಿ ಸಹಕಾರಕ್ಕೆ ಪ್ರಾಜೆಕ್ಟ್ ಡೈರೆಕ್ಟರ್ ಸಂತೋಷ್ ಕುಮಾರ್ ಮನವಿ | ನೀರು ಶುದ್ಧೀಕರಣ ಘಟಕಕ್ಕೆ ಭೇಟಿ,…