ಬಂಟ್ವಾಳ ತಾಲೂಕಿನ ಕನ್ಯಾನ ಬಾಳೆಕೋಡಿಯಲ್ಲಿರುವ ಶ್ರೀ ಕಾಶೀಕಾಳಭೈರವೇಶ್ವರ ಶಿಲಾಂಜನ ಕ್ಷೇತ್ರದ ಶ್ರೀ ಡಾ. ಶಶೀಕಾಂತಮಣಿ ಸ್ವಾಮೀಜಿ (45) ಸೋಮವಾರ ತಡರಾತ್ರಿ ಶಿವೈಕ್ಯವಾದರು. ಅವರು ಕೆಲ ಸಮಯದಿಂದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ದಶಕದಿಂದೀಚೆಗೆ ಕ್ಷೇತ್ರದ ಮೂಲಕ ಆಧ್ಯಾತ್ಮ, ಸಾಂಸ್ಕೃತಿಕ, ಸಾಹಿತ್ಯ ಚಟುವಟಿಕೆಗಳನ್ನು ನಡೆಸುತ್ತಿದ್ದ ಅವರು, ಈ ನಿಟ್ಟಿನಲ್ಲಿ ಹಲವು ಸಮಾವೇಶ, ವಿಚಾರಗೋಷ್ಠಿಗಳನ್ನೂ ಆಯೋಜಿಸಿದ್ದರು. ಸಮಾಜದ, ತುಳುನಾಡಿನ ವಿಚಾರಗಳಿಗೆ ಸಂಬಂಧಿಸಿ ಕ್ಷಿಪ್ರವಾಗಿ ಸ್ಪಂದಿಸುತ್ತಿದ್ದ ಸ್ವಾಮೀಜಿ ಹಿಂದೆ ಕಂಬಳ ಪರ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಸ್ವತಃ ಕವಿಯಾಗಿದ್ದ ಅವರು ನಾನಾ ಕವಿಗೋಷ್ಠಿಗಳಲ್ಲಿ ಭಾಗವಹಿಸಿ ಗಮನ ಸೆಳೆದಿದ್ದರು. ಅವರಿಗೆ ವಿಶ್ವವಿದ್ಯಾನಿಲಯವೊಂದು ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು. www.bantwalnews.com ನ ಆರಂಭದಿಂದಲೂ ಪ್ರೋತ್ಸಾಹ ನೀಡುತ್ತಿದ್ದ ಅವರ ನಿಧನಕ್ಕೆ www.bantwalnews.com ಸಂತಾಪ ವ್ಯಕ್ತಪಡಿಸುತ್ತದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕನ್ಯಾನ ಬಾಳೆಕೋಡಿ ಶ್ರೀ ಶಶಿಕಾಂತಮಣಿ ಸ್ವಾಮೀಜಿ ಇನ್ನಿಲ್ಲ"
Be the first to comment on "ಕನ್ಯಾನ ಬಾಳೆಕೋಡಿ ಶ್ರೀ ಶಶಿಕಾಂತಮಣಿ ಸ್ವಾಮೀಜಿ ಇನ್ನಿಲ್ಲ"