ಅಕ್ರಮ ಕಸಾಯಿಖಾನೆಗೆ ಬಂಟ್ವಾಳ ಪೊಲೀಸರ ದಾಳಿ ಮುಂದುವರಿದಿದೆ. ಲೊರೆಟ್ಟೊ ಟಿಪ್ಪುನಗರ ಎಂಬಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಹತ್ಯೆ ಮಾಡಿ ಮಾರಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣೆಯ ಎಸ್.ಐ.ಅವಿನಾಶ್ ಮತ್ತು ಸಿಬ್ಬಂದಿ, ಮೂವರನ್ನು ಬಂಧಿಸಿದ್ದಾರೆ.
ಲೊರೆಟ್ಟೋ ನಿವಾಸಿಗಳಾದ ಉಮ್ಮರ್ ಫಾರೂಕ್, ಆದಂ ಮತ್ತು ಆಸ್ಬಕ್ ಬಂಧಿತ ಆರೋಪಿಗಳು. ನಾಲ್ಕು ಜಾನುವಾರು, ಎರಡು ಕಿಂಟ್ವಾಲ್ ದನದ ಮಾಂಸ ಎರಡು ದನದ ತಲೆ ಒಂದು ಪಿಕಪ್ ವಾಹನ ಹಾಗೂ ಜಾನುವಾರು ಕಡಿದು ಮಾಂಸ ಮಾಡಲು ಉಪಯೋಗಿಸುವ ಸಲಕರಣೆಗಳನ್ನು ಬಂಧಿತರಿಂದ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಲೊರೆಟ್ಟೊದಲ್ಲಿ ಅಕ್ರಮ ಕಸಾಯಿಖಾನೆ: ಮೂವರ ಸೆರೆ"
Be the first to comment on "ಲೊರೆಟ್ಟೊದಲ್ಲಿ ಅಕ್ರಮ ಕಸಾಯಿಖಾನೆ: ಮೂವರ ಸೆರೆ"