ಅಕ್ರಮ ಕಸಾಯಿಖಾನೆಗೆ ಬಂಟ್ವಾಳ ಪೊಲೀಸರ ದಾಳಿ ಮುಂದುವರಿದಿದೆ. ಲೊರೆಟ್ಟೊ ಟಿಪ್ಪುನಗರ ಎಂಬಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಹತ್ಯೆ ಮಾಡಿ ಮಾರಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣೆಯ ಎಸ್.ಐ.ಅವಿನಾಶ್ ಮತ್ತು ಸಿಬ್ಬಂದಿ, ಮೂವರನ್ನು ಬಂಧಿಸಿದ್ದಾರೆ.
ಲೊರೆಟ್ಟೋ ನಿವಾಸಿಗಳಾದ ಉಮ್ಮರ್ ಫಾರೂಕ್, ಆದಂ ಮತ್ತು ಆಸ್ಬಕ್ ಬಂಧಿತ ಆರೋಪಿಗಳು. ನಾಲ್ಕು ಜಾನುವಾರು, ಎರಡು ಕಿಂಟ್ವಾಲ್ ದನದ ಮಾಂಸ ಎರಡು ದನದ ತಲೆ ಒಂದು ಪಿಕಪ್ ವಾಹನ ಹಾಗೂ ಜಾನುವಾರು ಕಡಿದು ಮಾಂಸ ಮಾಡಲು ಉಪಯೋಗಿಸುವ ಸಲಕರಣೆಗಳನ್ನು ಬಂಧಿತರಿಂದ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…