ಕೋವಿಡ್ 19 ಹಿನ್ನೆಲೆಯಲ್ಲಿ ಹೊರರಾಜ್ಯದಿಂದ ಮತ್ತು ಹೊರದೇಶದಿಂದ ಆಗಮಿಸುವವರಿಗೆ ಸೂಕ್ತ ಕ್ವಾರಂಟೈನ್ ವ್ಯವಸ್ಥೆಯನ್ನು ಮಾಡಬೇಕು. ಅವರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಮತ್ತು ಕೊರೊನಾದ ಜತೆಜತೆಯಲ್ಲಿ ಇದೀಗ ಡೆಂಗ್ಯು ಮತ್ತು ಮಲೇರಿಯ ರೋಗದ ಬಗ್ಗೆ ಅಽಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು.
ಸೋಮವಾರ ವಿಟ್ಲ ಪಟ್ಟಣ ಪಂಚಾಯತ್‌ನಲ್ಲಿ ಕೋವಿಡ್ ೧೯ ಹಿನ್ನೆಲೆಯಲ್ಲಿ ತಾಲೂಕು ವ್ಯಾಪ್ತಿಯ ಹಿರಿಯ ಅಽಕಾರಿಗಳ ಸಭೆ ಕರೆದು ಸಮಾಲೋಚನೆ ನಡೆಸಿದರು.
ತಹಸೀಲ್ದಾರ್ ರಶ್ಮಿ ಎಸ್.ಆರ್., ತಾ.ಪಂ.ಇಒ ರಾಜಣ್ಣ, ವಿಟ್ಲ ಪ.ಪಂ.ಮುಖ್ಯಾಧಿಕಾರಿ ಮಾಲಿನಿ, ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ವೇದಾವತಿ ಬಲ್ಲಾಳ್ ಮತ್ತು ವಿವಿಧ ಇಲಾಖೆಗಳ ಮುಖ್ಯಸ್ಥರು ಕೈಗೊಂಡ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಪ.ಪಂ.ಅಧ್ಯಕ್ಷೆ ದಮಯಂತಿ, ಉಪಾಧ್ಯಕ್ಷ ಜಯಂತ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಉಷಾ ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.
Be the first to comment on "ಕೋವಿಡ್ 19, ಡೆಂಗ್ಯೂ, ಮಲೇರಿಯ ಜಾಗೃತಿ, ಮುನ್ನೆಚ್ಚರಿಕೆ ಕ್ರಮಕ್ಕೆ ಮಠಂದೂರು ಸೂಚನೆ"