ಬಂಟ್ವಾಳ ತಾಲೂಕಿನಲ್ಲಿ ಮತ್ತೊಂದು ಅಕ್ರಮ ಕಸಾಯಿಖಾನೆ ಪ್ರಕರಣ ಪತ್ತೆ

ತಾಲೂಕಿನ ಸಾಲೆತ್ತೂರು ಕೊಳ್ನಾಡು ಎಂಬಲ್ಲಿ ಅಕ್ರಮವಾಗಿ ಕಸಾಯಿಖಾನೆ ಇರುವುದನ್ನು ಪತ್ತೆಹಚ್ಚಿರುವ ವಿಟ್ಲ ಪೊಲೀಸರು, ಈ ಸಂಬಂಧ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಜಾಹೀರಾತು

ವಿಟ್ಲ ಸಾಲೆತ್ತೂರು ಎಂಬಲ್ಲಿ ಧಾಳಿ ನಡೆಸಿದ ಪೊಲೀಸರು ಹ್ಯಾರಿಸ್ ಎಂಬಾತನನ್ನು ವಶಕ್ಕೆ ಪಡೆದು ಕಳವುಗೈದ ಹಸು, ಒಂದು ಪಿಕ್ಅಪ್ ವಾಹನ, ಚಾಕು, ಹಗ್ಗ ಗಳನ್ನು ಸ್ವಾಧೀನಪಡಿಸಿ ಆತನನ್ನು ವಿಚಾರಣೆ ನಡೆಸಲಾಗಿ ಆರೋಪಿ ನೀಡಿದ ಮಾಹಿತಿಯಂತೆ ಸಾಲೆತ್ತೂರು ಗ್ರಾಮದ ಐತಕುಮೇರ್ ನ  ತೋಟದ ಶೆಡ್ ಗೆ ಧಾಳಿ ನಡೆಸಿ ಸದರಿ ಸ್ಥಳದಿಂದ ಕಡಿಯಲಾಗಿದ್ದ ದನ, ಸುಮಾರು 200 ರಷ್ಟು ದನದ ಚರ್ಮಗಳನ್ನು ಮತ್ತು ದನ ಕಡಿಯಲು ಬಳಸಿದ ವಸ್ತುಗಳು ಹಾಗೂ ವಾಹನಗಳನ್ನು ಜಪ್ತಿ ಗೊಳಿಸಿರುತ್ತಾರೆ. ಅಲ್ಲದೇ ಕಡಿಯಲು ಕಟ್ಟಿ ಹಾಕಿದ್ದ 7 ಹಸುಗಳನ್ನು ರಕ್ಷಿಸಿ ಸ್ವಾಧೀನ ಪಡಿಸಲಾಗಿದ್ದು ತನಿಖೆ ಪ್ರಗತಿಯಲ್ಲಿದೆ.

ದನ ಕಳ್ಳತನದ ಮಾಹಿತಿಯನ್ನು ಆಧರಿಸಿ ಪೊಲೀಸರ ತಂಡ ಕೊಳ್ನಾಡಿನ ಮನೆಯೊಂದಕ್ಕೆ ದಾಳಿ ನಡೆಸಿದ ಸಂದರ್ಭ ಕೃತ್ಯ ಬೆಳಕಿಗೆ ಬಂದಿದೆ.  ಪೊಲೀಸ್ ವರಿಷ್ಠಾಧಿಕಾರಿ ಡಾ. ಲಕ್ಷ್ಮೀ ಪ್ರಸಾದ್, ಡಿವೈಎಸ್‌ಪಿ ವೆಲೆಂಟನ್ ಡಿಸೋಜ್, ವೃತ್ತ ನಿರೀಕ್ಷಕ ಟಿ. ಡಿ. ನಾಗರಾಜ್ ಮಾರ್ಗದರ್ಶನದಲ್ಲಿ ವಿಟ್ಲ ಉಪನಿರೀಕ್ಷಕ ವಿನೋದ್ ಎಸ್. ಕೆ. ಅವರನ್ನೊಳಗೊಂಡ ಪೊಲೀಸ್ ಸಿಬ್ಬಂದಿಗಳಾದ ಜಯರಾಮ ಕೆ. ಟಿ., ಪ್ರತಾಪ ರೆಡ್ಡಿ, ವಿಶ್ವನಾಥ, ಶಂಕರ್, ಅಶೋಕ, ಹೇಮರಾಜ, ಡ್ಯಾನಿ ತ್ರಾವೋ, ವಿನೋದ್, ವಿಠಲ ಮತ್ತಿತರರ ತಂಡ ಕಾರ್ಯಾಚರಣೆ ನಡೆಸಿತು. ತಾಲೂಕಿನಲ್ಲಿ ಕೆಲ ದಿನಗಳ ಹಿಂದೆ ಕಸಾಯಿಖಾನೆ ಅಕ್ರಮ ಪ್ರಕರಣವೊಂದರ ಆರೋಪದಲ್ಲಿ ದಾಳಿ ನಡೆಸಲಾಗಿತ್ತು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ತಾಲೂಕಿನಲ್ಲಿ ಮತ್ತೊಂದು ಅಕ್ರಮ ಕಸಾಯಿಖಾನೆ ಪ್ರಕರಣ ಪತ್ತೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*