ಬಂಟ್ವಾಳ

ಸೀಲ್ ಡೌನ್ ತೆರವು ಕುರಿತು ನಿನ್ನೆಯೇ ಸಿಎಂ ಜತೆ ಚರ್ಚೆ : ಶಾಸಕ ನಾಯ್ಕ್

ಬುಧವಾರ ರಾತ್ರಿಯೇ ಬಂಟ್ವಾಳ ಪೇಟೆಯ ಸೀಲ್ ಡೌನ್ ತೆರವು ವಿಚಾರ ಕುರಿತು ಸಿಎಂ ಜೊತೆ ಚರ್ಚಿಸಿದ್ದೇನೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದ್ಧಾರೆ.

ಅವರು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಗ್ಗೆ ಡಿಸಿಎಂ ಅಶ್ವತ್ಥನಾರಾಯಣ ಅವರಿಗೂ ವಿಷಯ ತಿಳಿಸಲಾಗಿದೆ. ಸೀಲ್‌ಡೌನ್ ಸಡಿಲಿಕೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ಸರಕಾರದ ಮಟ್ಟದಲ್ಲಿ ಪ್ರಯತ್ನಗಳು ಮಾಡುತ್ತಿದ್ದೇನೆ. ಸೀಲ್‌ಡೌನ್ ಸಡಿಲಿಕೆ ವಿಚಾರವಾಗಿ ಡಿಸಿಎಂ ಅವರು ದ.ಕ.ಜಿಲ್ಲಾಧಿಕಾರಿಯವರ ಜತೆ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ತಹಶೀಲ್ದಾರ್ ಹಾಗೂ ಟಿಎಚ್‌ಒ ಅವರ ಪ್ರಸ್ತಾವನೆಯ ಆಧಾರದಲ್ಲಿ ಕ್ರಮಕೈಗೊಳ್ಳುವ ಕುರಿತು ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ ಎಂದು ಶಾಸಕರು ತಿಳಿಸಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts