ಬಂಟ್ವಾಳ

ಸೀಲ್ ಡೌನ್ ಪ್ರದೇಶಗಳ ನೀರು, ಮನೆ ತೆರಿಗೆ, ವಿದ್ಯುತ್ ಬಿಲ್ ಮನ್ನಾ ಮಾಡಲು ಬ್ಲಾಕ್ ಕಾಂಗ್ರೆಸ್ ಆಗ್ರಹ

ಬಂಟ್ವಾಳನ್ಯೂಸ್ ನಲ್ಲಿ ಇತರ ಸುದ್ದಿ, ಲೇಖನಗಳಿಗಾಗಿ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿರಿ

https://chat.whatsapp.com/LNdS3qwTHVYLnGnKXmfSCn

ಜಾಹೀರಾತು


ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಪ್ರದೇಶದ ಸುಮಾರು 120 ಮನೆಗಳ ನಿವಾಸಿಗಳ ಬದುಕು ಸೀಲ್ ಡೌನ್‌ನಿಂದಾಗಿ ಸಂಕಷ್ಟಕ್ಕೀಡಾಗಿದ್ದು ಈ ಹಿನ್ನಲೆಯಲ್ಲಿ ಇಲ್ಲಿಯ ನಿವಾಸಿಗಳ ಮನೆ ತೆರಿಗೆ, ವಿದ್ಯುತ್ ಬಿಲ್, ನೀರಿನ ಬಿಲ್ಲನ್ನು ಮನ್ನಾ ಮಾಡುವಂತೆ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಆಗ್ರಹಿಸಿದ್ದಾರೆ. ಈ ಕುರಿತು ಬಂಟ್ವಾಳ ತಾಪಂ ಕಾರ್ಯನಿರ್ವಹಣಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಪ್ರದೇಶದಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವ ಹಿನ್ನಲೆಯಲ್ಲಿ ಈ ಪ್ರದೇಶವನ್ನು ಸೀಲ್ ಡೌನ್ ಪ್ರದೇಶವೆಂದು ಘೋಷಿಸಲಾಗಿದ್ದು ಇಲ್ಲಿಯ ಸುಮಾರು ೧೨೦ ಮನೆಗಳ ಜನರಿಗೆ ಯಾವುದೇ ಮೂಲಭೂತ ಸೌಲಭ್ಯ ದೊರೆತಿಲ್ಲ. ಇದರಿಂದಾಗಿ ಇಲ್ಲಿಯ ಜನರಿಗೆ ದಿನ ನಿತ್ಯದ ಬದುಕು ನಿರ್ವಹಣೆ ಕಷ್ಟವಾಗಿದ್ದು ಈ ಸಂದರ್ಭ ಇಲ್ಲಿನ ನಿವಾಸಿಗಳ ನೀರಿನ ಬಿಲ್/ ಮನೆ ತೆರಿಗೆ/ವಿದ್ಯುತ್ ಬಿಲ್ ಮನ್ನಾ ಮಾಡುವ ಮುಖಾಂತರ ಅವರ ಸಂಕಷ್ಟಗಳಿಗೆ ಸ್ಪಂದಿಸಬೇಕೆಂದು ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಆಲಿ, ತಾಲೂಕು ಪಂಚಾಯತ್ ಸದಸ್ಯರಾದ ಗಾಯತ್ರಿ ರವೀಂದ್ರ ಸಪಲ್ಯ, ಬಂಟ್ವಾಳ ವಿಧಾನ ಸಭೆ ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕುಲಾಲ್, ನರಿಕೊಂಬು ವಲಯ ಅಧ್ಯಕ್ಷರಾದ ಮಾಧವ ಕರ್ಬೆಟ್ಟು, ಆಲ್ಬರ್ಟ್ ಮಿನೇಜಸ್, ಪಂಚಾಯತ್ ಸದಸ್ಯರಾದ ರವೀಂದ್ರ ಸಪಲ್ಯ ಕೃಷ್ಣಪ್ಪ ನಾಟಿ, ಅರುಣ್ ಶೆಟ್ಟಿ. ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts