ಬಂಟ್ವಾಳ: ಸಂಸದ ನಳಿನ್ ಕುಮಾರ್ ಕಟೀಲ್ ಅವರಿಂದ ಬಿ.ಸಿ.ರೋಡ್ – ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿಶೀಲನೆ ಶನಿವಾರ ಸಂಜೆ ನಡೆಯಿತು.
ಒಟ್ಟು 19.85 ಕಿ.ಮೀ. ರಸ್ತೆ ಅಭಿವೃದ್ಧಿಯಾಗುತ್ತಿದ್ದು, ಇದರಲ್ಲಿ 16 ಕಿ.ಮೀ. ಡಾಂಬರು ಹಾಕಲಾಗುತ್ತಿದೆ. ಇದು 10 ಮೀಟರ್ ಅಗಲವಿದ್ದು, ಈಗಾಗಲೇ 12 ಕಿ.ಮೀ. ಕಾಮಗಾರಿ ಮುಕ್ತಾಯಗೊಂಡಿದೆ. ಬಿ.ಸಿ.ರೋಡ್ ನಿಂದ ಜಕ್ರಿಬೆಟ್ಟಿನವರೆಗೆ 4.85 ಕಿ.ಮೀ. ದೂರ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದ್ದು, ಅದರಲ್ಲಿ ಒಂದು ಪಾರ್ಶ್ವದ 7 ಮೀಟರ್ ಅಗಲದಲ್ಲಿ ಕೆಲಸ ನಡೆಯುತ್ತಿದ್ದು, ಜೂನ್ ಒಳಗೆ ಬಿಟ್ಟುಕೊಡಲಾಗುತ್ತದೆ ಎಂದು ಹೆದ್ದಾರಿ ಇಲಾಖೆಯ ಎಇಇ ರಮೇಶ್ ಅವರು ಈ ಸಂದರ್ಭ ಸಂಸದರಿಗೆ ವಿವರಿಸಿದರು. ಈ ವೇಳೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ ಮತ್ತಿತರರು ಈ ಸಂದರ್ಭ ಜತೆಗಿದ್ದರು.
Be the first to comment on "ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಪರಿಶೀಲನೆ"