ಕಲ್ಲಡ್ಕದ ಯುವಕನೊಬ್ಬ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಲು ಪ್ರಯತ್ನಿಸಿದಾಗ ವಿಷಯ ತಿಳಿದ ಸ್ಥಳೀಯ ಗೂಡಿನಬಳಿ ಯುವಕರಾದ ಮುಹಮ್ಮದ್, ಸಮೀರ್,ಝಾಯಿದ್ , ಆರಿಫ್, ಮುಕ್ತಾರ್ ತೌಸೀಫ್ ರವರು ಯಾವುದೇ ಜಾತಿ ಧರ್ಮ ವನ್ನು ಲೆಕ್ಕಿಸದೆ ಕೂಡಲೇ ತಮ್ಮ ಜೀವನವನ್ನು ಪಣಕ್ಕಿಟ್ಟು ನದಿಗೆ ಹಾರಿ ಆ ಯುವಕನನ್ನು ನದಿಯಿಂದ ದಡಕ್ಕೆ ಸೇರಿಸಿ ಪ್ರಥಮ ಚಿಕಿತ್ಸಾ ವಿಧಾನಗಳನ್ನು ನೀಡುವುದರ ಮೂಲಕ ಪ್ರಾಣವನ್ನು ರಕ್ಷಿಸಲು ಪ್ರಯತ್ನಿಸಿದರು.ಆದರೆ ವಿಧಿಯ ಆಟವು ಬೇರೆಯಾಗಿತ್ತು. ಈ ವೀರ ಯುವಕರಿಗೆ ಕರ್ನಾಟಕ ಕಲ್ಚರಲ್ ಫೌಂಡೇಷನ್ ಒಮಾನ್ ರಾಷ್ಟ್ರೀಯ ಸಮಿತಿಯು ಅಭಿನಂದನೆ ಸಲ್ಲಿಸುತ್ತದೆ.
ಜಾಹೀರಾತು
ಈದುಲ್ ಫಿತ್ರ್ ಹಬ್ಬ ಆಚರಿಸುವ ದಿನದಂದು ನಡೆದ ಘಟನೆಯು ಇಸ್ಲಾಮ್ ಜಗತ್ತಿಗೆ ಶಾಂತಿ, ಸೌಹಾರ್ದತೆ, ತ್ಯಾಗವನ್ನು ನೆನಪಿಸುವ ಮಾನವೀಯತೆಯ ಸಂದೇಶವನ್ನು ನೀಡಿದ್ದಾರೆ. ಇಡೀ ನಾಡು ಹೆಮ್ಮೆಪಡುವಂತಹ ಇವರ ಸೇವೆಯು ಶ್ಲಾಘನೀಯ ಎಂದು ಕೆಸಿಎಫ್ ಒಮಾನ್ ಪ್ರತಿನಿಧಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ನದಿಗೆ ಹಾರಿದ ಯುವಕನ ರಕ್ಷಣೆಗೆ ದಾವಿಸಿದ ಅಪತ್ಬಾಂಧವರಿಗೆ ಕೆಸಿಎಫ್ ಒಮಾನ್ ಅಭಿನಂದನೆ"
Be the first to comment on "ನದಿಗೆ ಹಾರಿದ ಯುವಕನ ರಕ್ಷಣೆಗೆ ದಾವಿಸಿದ ಅಪತ್ಬಾಂಧವರಿಗೆ ಕೆಸಿಎಫ್ ಒಮಾನ್ ಅಭಿನಂದನೆ"