ಕಾಂಗ್ರೆಸ್ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಪದಗ್ರಹಣಕ್ಕೆ ಸಂಬಂಧಿಸಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಪದಾಧಿಕಾರಿಗಳ ಸಭೆ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭ ಮಾತನಾಡಿದ ರಮಾನಾಥ ರೈ, ಕೊರೊನಾ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಹೋಗಿ ಭಾಗವಹಿಸಲು ಆಗದೇ ಇರುವ ಕಾರಣ, ಪ್ರತಿ ಗ್ರಾಪಂ ಪಂಚಾಯಿತಿ ಮತ್ತು ಪುರಸಭಾ ವಾರ್ಡ್ ವ್ಯಾಪ್ತಿಯಲ್ಲಿ ಟಿ.ವಿ.ಗಳ ಮೂಲಕ ಮತ್ತು ಆಪ್ ಮೂಲಕ ಲೈವ್ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು. ಬಂಟ್ವಾಳ ಪುರಸಭಾ ವ್ಯಾಪ್ತಿಯ 27 ಪುರಸಭಾ ವಾರ್ಡ್ ಗಳಲ್ಲಿ ಬಂಟ್ವಾಳ ಕಸ್ಬಾಕ್ಕೆ ಸಂಬಂಧಿಸಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ, ಬಿ.ಮೂಡ ಗ್ರಾಮಕ್ಕೆ ಸಂಬಂಧಿಸಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿ, ಪಾಣೆಮಂಗಳೂರುಕಸಬಾಕ್ಕೆ ಸಂಬಂಧಿಸಿ ಮೇಲ್ಕಾರಿನ ಬಿರ್ವ ಸೆಂಟರ್ ನಲ್ಲಿ ನೇರಪ್ರಸಾರ ನಡೆಯಲಿದ್ದರೆ, ಉಳಿದ ಎಲ್ಲ ಗ್ರಾಪಂಗಳಲ್ಲೇ ವೀಕ್ಷಣೆ ನಡೆಯಲಿದೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ, ಕೆಪಿಸಿಸಿ ಕಾರ್ಯದರ್ಶಿ ಸವಿತಾ ರಮೇಶ್, ಕ್ಷೇತ್ರ ವೀಕ್ಷಕರಾದ ಸುರೇಶ್ ಕೋಟ್ಯಾನ್, ಪ್ರಥ್ವೀರಾಜ್, ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಮಾಜಿ ಅಧ್ಯಕ್ಷರಾದ ಮಾಯಿಲಪ್ಪ ಸಾಲಿಯಾನ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ಸುಬೋದ್ ಆಳ್ವ, ತಾಪಂ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಜಿಪಂ ಸದಸ್ಯರಾದ ಎಂ.ಎಸ್.ಮಹಮ್ಮದ್, ಮಂಜುಳಾ ಮಾಧವ ಮಾವೆ, ಬಿ.ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ತಾಪಂ ಸದಸ್ಯರಾದ ಧನಲಕ್ಷ್ಮೀ ಬಂಗೇರ, ಶಿವಪ್ರಸಾದ್ ಕನಪ್ಪಾಡಿ, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಪಕ್ಷ ಪ್ರಮುಖರಾದ ಸುದರ್ಶನ ಜೈನ್, ಪದ್ಮನಾಭ ರೈ, ಸಂಪತ್ ಕುಮಾರ್ ಶೆಟ್ಟಿ, ಮೋಹನ ಗೌಡ ಕಲ್ಮಂಜ, ಮಹಮ್ಮದ್ ನಂದಾವರ, ಜಗದೀಶ ಕೊಯ್ಲ, ಮಾಣಿಕ್ಯರಾಜ ಜೈನ್, ಪುರಸಭಾ ಸದಸ್ಯರಾದ ಜನಾರ್ದನ ಚಂಢ್ತಿಮಾರ್, ಗಂಗಾಧರ ಪೂಜಾರಿ, ಸಿದ್ದಿಕ್ ಗುಡ್ಡೆಯಂಗಡಿ, ಎಲ್ಲ ವಲಯ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು ಈ ಸಂದರ್ಭ ಹಾಜರಿದ್ದರು. ಇದೇ ವೇಳೆ ನೇತ್ರಾವತಿ ನದಿಗೆ ಆತ್ಮಹತ್ಯೆ ಮಾಡಲು ಹಾರಿದ ಯುವಕನ ರಕ್ಷಿಸಿದ ಗೂಡಿನಬಳಿ ಯುವಕರನ್ನು ಸನ್ಮಾನಿಸಲಾಯಿತು.