ಪ್ರಮುಖ ಸುದ್ದಿಗಳು

ಇವತ್ತು ರಾಜ್ಯದಲ್ಲಿ 257 ಕೇಸ್: ನಿಲ್ಲದ ಕೊರೊನಾ ಓಟ

ಗುರುವಾರ 257 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಜಾಹೀರಾತು

ಇದರೊಂದಿಗೆ ರಾಜ್ಯದಲ್ಲಿ ಒಟ್ಟು 4320 ಪ್ರಕರಣಗಳು ದಾಖಲಾದಂತಾಗಿದೆ. ಇಂದು 4 ಮಂದಿ ಮೃತಪಟ್ಟಿದ್ದು, ಒಟ್ಟು 57 ಮಂದಿ ಸಾವನ್ನಪ್ಪಿದಂತಾಗಿದೆ. ರಾಜ್ಯದಲ್ಲಿ ಒಟ್ಟು 1610 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, 2651 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವುಗಳ ಪೈಕಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 13. ಇಂದು ಗೊತ್ತಾದ ಪ್ರಕರಣಗಳಲ್ಲಿ 155 ಮಂದಿ ಅಂತಾರಾಜ್ಯ ಮತ್ತು 1 ಅಂತಾರಾಷ್ಟ್ರೀಯ ಪ್ರಯಾಣಿಕರು. ಉಳಿದಂತೆ 101 ಕೇಸ್ ಗಳು ಇಲ್ಲಿಯದ್ದೇ ಎಂಬುದು ಆತಂಕಕಾರಿ ವಿದ್ಯಮಾನವೂ ಹೌದು.

ಇಂದು ಗೊತ್ತಾದ ಪ್ರಕರಣಗಳಲ್ಲಿ ಉಡುಪಿ 92, ರಾಯಚೂರು 88 ಹೊಸ ಕೇಸ್ ಗಳೊಂದಿಗೆ ಗಮನ ಸೆಳೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಹೊಸ 4 ಪ್ರಕರಣಗಳು ವರದಿಯಾಗಿವೆ. ಉಡುಪಿ ಮತ್ತೆ 564 ಕೇಸ್ ಗಳೊಂದಿಗೆ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದ್ದರೆ, ದಕ್ಷಿಣ ಕನ್ನಡ 12ನೇ ಸ್ಥಾನದಲ್ಲಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts