ಬಂಟ್ವಾಳನ್ಯೂಸ್ ನ ಹೆಚ್ಚಿನ ಸುದ್ದಿಗಳಿಗಾಗಿ ಈ ವಾಟ್ಸಾಪ್ ಗುಂಪಿಗೆ ಸೇರಬಹುದು. ಲಿಂಕ್ ಇಲ್ಲಿದೆ.
https://chat.whatsapp.com/LNdS3qwTHVYLnGnKXmfSCn
ಭಾರತದಲ್ಲಿ ಕೊರೊನಾ ಸಂಬಂಧಿಸಿ 2,46,628 ಪ್ರಕರಣಗಳು ವರದಿಯಾಗಿದ್ದು, 6929 ಮಂದಿ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರ ಮತ್ತು ಗುಜರಾತ್ ನಲ್ಲಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚು. ಅದೇ ರೀತಿ ಕೊರೊನಾ ಸೋಂಕಿತರ ಸಂಖ್ಯೆಯೂ ಹೆಚ್ಚು. ಇನ್ನೊಂದು ವಿಚಾರವೆಂದರೆ, ಕರ್ನಾಟಕದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇವರ ಪೈಕಿ ಹೆಚ್ಚಿನವರು ಮಹಾರಾಷ್ಟ್ರ ಮತ್ತು ಗುಜರಾತ್ ನಿಂದ ಬಂದವರು.
ದಕ್ಷಿಣ ಕನ್ನಡ ಜಿಲ್ಲೆಯ 17 ಮಂದಿ ಸೇರಿದಂತೆ ರಾಜ್ಯದಲ್ಲಿ ಒಟ್ಟು 239 ಹೊಸ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 5452ಕ್ಕೇರಿದೆ. ಇವುಗಳ ಪೈಕಿ 2132 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, 61 ಮಂದಿ ಮೃತಪಟ್ಟಿದ್ದಾರೆ. ಇವತ್ತು ಇಬ್ಬರು ಸಾವನ್ನಪ್ಪಿದ್ದಾರೆ. ಒಟ್ಟು 183 ಮಂದಿ ಹೊರರಾಜ್ಯ, 9 ಮಂದಿ ಹೊರದೇಶಗಳಿಂದ ಬಂದವರಿಗೆ ಇಂದು ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಸಕ್ರಿಯವಾಗಿರುವ ಪ್ರಕರಣಗಳ ಸಂಖ್ಯೆ ಒಟ್ಟು 3527.
ಇಂದು ಉಡುಪಿ ಜಿಲ್ಲೆಯಲ್ಲಿ 13 ಪ್ರಕರಣಗಳು ದಾಖಲಾಗಿದ್ದು, ಒಟ್ಟು 902 ಸೋಂಕಿತರು ಅಲ್ಲಿ ದಾಖಲಾದಂತಾಗಿದೆ. ಇವುಗಳ ಪೈಕಿ 103 ಬಿಡುಗಡೆಯಾದ ಕಾರಣ, 798 ಮಂದಿ ಸಕ್ರಿಯ ಪ್ರಕರಣಗಳು ಈಗ ಉಡುಪಿಯಲ್ಲಿ ಇವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇವತ್ತು 14, 15, 17ರ ಬಾಲಕರು, 41, 32 ವರ್ಷದ ಮಹಿಳೆಯರು ಸೇರಿದಂತೆ ಒಟ್ಟು 17 ಮಂದಿಗೆ ಕೊರೊನಾ ಪಾಸಿಟಿವ್ ಸೋಂಕು ಪತ್ತೆಯಾಗಿದೆ. ನಾಲ್ವರು ಪುರುಷರು ಮತ್ತು 13 ವರ್ಷದ ಬಾಲಕಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 89 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 96 ಮಂದಿ ಬಿಡುಗಡೆ ಹೊಂದಿದ್ದಾರೆ. ಇಂದು 151 ಮಂದಿಯ ಗಂಟಲು ದ್ರವ ಮಾದರಿಯನ್ನು ಪಡೆಯಲಾಗಿದ್ದು, 21 ಮಂದಿಯ ಪರೀಕ್ಷಾ ವರದಿ ಬರಲು ಬಾಕಿ ಇದೆ. ಒಟ್ಟು 192 ಪಾಸಿಟಿವ್ ಕೇಸ್ ಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರದಿಯಾಗಿದ್ದು, ಇವರಲ್ಲಿ 10 ಅನ್ಯರಾಜ್ಯ, ಜಿಲ್ಲೆಯವು.