ಪೊಳಲಿ ಕ್ಷೇತ್ರದಲ್ಲಿ ಭಕ್ತರಿಗೆ ಪ್ರವೇಶ: ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಸಭೆ

ಜಾಹೀರಾತು

ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಸೋಮವಾರದಿಂದ ಭಕ್ತರಿಗೆ ಪ್ರವೇಶ ಕಲ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ಶ್ರೀ ಕ್ಷೇತ್ರದ ಆಡಳಿತ ಮಂಡಳಿಯ ಸಭೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನಡೆಸಿದರು. ಕೊರೋನಾ ವೈರಾಣುವಿನ ಭೀತಿಯ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು ಸರಕಾರದಿಂದ ಮುಂದಿನ ಆದೇಶ ಬರುವವರೆಗೆ ಯಾವುದೇ ಸೇವೆಗಳು ನಡೆಸಲು ಅನುಮತಿಯನ್ನು ನೀಡಿಲ್ಲ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ  ಶಾಸಕರು ಮನವಿ ಮಾಡಿದರು. ಶ್ರೀ ಕ್ಷೇತ್ರದಲ್ಲಿ ಸ್ವಚ್ಛತಾ ಕಾರ್ಯ ಮತ್ತು ಸ್ಯಾನಿಟೈಸೇಶನ್ ನಡೆಸಲಾಯಿತು.ಈ ಸಂದರ್ಭ ಆಡಳಿತ ಮೋಕ್ತೇಸರರಾದ ಡಾ.ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು,ಮೋಕ್ತೇಸರಾದ ಚೇರ ಸೂರ್ಯನಾರಾಯಣ ರಾವ್, ಪವಿತ್ರಪಾಣಿ ಮೋಕ್ತೇಸರರಾದ ಮಾಧವ ಭಟ್, ಪರಮೇಶ್ವರ ಭಟ್, ರಾಮ್ ಭಟ್ ಕಾರ್ಯ ನಿರ್ವಹಣಾಧಿಕಾರಿ ಪ್ರವೀಣ್ ಮತ್ತು ಅರ್ಚಕವೃಂದದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪೊಳಲಿ ಕ್ಷೇತ್ರದಲ್ಲಿ ಭಕ್ತರಿಗೆ ಪ್ರವೇಶ: ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*