ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಸೋಮವಾರದಿಂದ ಭಕ್ತರಿಗೆ ಪ್ರವೇಶ ಕಲ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ಶ್ರೀ ಕ್ಷೇತ್ರದ ಆಡಳಿತ ಮಂಡಳಿಯ ಸಭೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನಡೆಸಿದರು. ಕೊರೋನಾ ವೈರಾಣುವಿನ ಭೀತಿಯ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು ಸರಕಾರದಿಂದ ಮುಂದಿನ ಆದೇಶ ಬರುವವರೆಗೆ ಯಾವುದೇ ಸೇವೆಗಳು ನಡೆಸಲು ಅನುಮತಿಯನ್ನು ನೀಡಿಲ್ಲ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಶಾಸಕರು ಮನವಿ ಮಾಡಿದರು. ಶ್ರೀ ಕ್ಷೇತ್ರದಲ್ಲಿ ಸ್ವಚ್ಛತಾ ಕಾರ್ಯ ಮತ್ತು ಸ್ಯಾನಿಟೈಸೇಶನ್ ನಡೆಸಲಾಯಿತು.ಈ ಸಂದರ್ಭ ಆಡಳಿತ ಮೋಕ್ತೇಸರರಾದ ಡಾ.ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು,ಮೋಕ್ತೇಸರಾದ ಚೇರ ಸೂರ್ಯನಾರಾಯಣ ರಾವ್, ಪವಿತ್ರಪಾಣಿ ಮೋಕ್ತೇಸರರಾದ ಮಾಧವ ಭಟ್, ಪರಮೇಶ್ವರ ಭಟ್, ರಾಮ್ ಭಟ್ ಕಾರ್ಯ ನಿರ್ವಹಣಾಧಿಕಾರಿ ಪ್ರವೀಣ್ ಮತ್ತು ಅರ್ಚಕವೃಂದದವರು ಉಪಸ್ಥಿತರಿದ್ದರು.