ಕೊರೊನಾಕ್ಕೆ ಸಂಬಂಧಿಸಿ ರಾಜ್ಯದಲ್ಲಿ ಇಂದು 387 ಜನ ಬಿಡುಗಡೆ ಹೊಂದಿದ್ದು, ಒಟ್ಟು 2,519 ಮಂದಿ ಗುಣಮುಖರಾಗಿದ್ದಾರೆ. 3,175 ಸಕ್ರಿಯ ಪ್ರಕರಣಗಳಿದ್ದು, 14 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದಿನ 308 ಕೊರೊನಾ ಸೋಂಕಿತರ ಪೈಕಿ 277 ಹೊರ ರಾಜ್ಯದವರಾಗಿದ್ದು, ಒಬ್ಬರು ಅಂತಾರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇವತ್ತು ಮೂವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 195ಕ್ಕೇರಿದೆ (ಇವರಲ್ಲಿ 10 ಅನ್ಯಜಿಲ್ಲೆ, ರಾಜ್ಯದವರು). ಮಹಿಳೆ ಸಹಿತ ಇಬ್ಬರು ಪುರುಷರು ಇಂದು ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ಕೋವಿಡ್ -19 ಸೋಂಕು ಶಂಕೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು 217 ಮಂದಿಯ ಗಂಟಲು ದ್ರವದ ಮಾದರಿಯಲ್ಲಿ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಮಂಗಳೂರಿನ ಇಎಸ್ಐ ಹಾಸ್ಪಿಟಲ್, ಸುರತ್ಕಲ್ನ ಎನ್ಐಟಿಕೆ ಹಾಗೂ ವೆನ್ಲಾಕ್ ಆಸ್ಪತ್ರೆಯ ಕ್ವಾರಂಟೈನ್ನಲ್ಲಿ ಯಾರೂ ಇಲ್ಲ. ಇಂದು 27 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಮಂಗಳೂರಲ್ಲಿ ಈವರೆಗೆ 42,914 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದೆ. ಈವರೆಗೆ 9,756 ಮಂದಿಯ ಗಂಟಲು ದ್ರವ ಪಡೆಯಲಾಗಿದ್ದು, ಈವರೆಗೆ 9,652 ಮಂದಿಯ ವರದಿ ಬಂದಿದೆ. ಅದರಲ್ಲಿ 9,457 ಮಂದಿಯ ವರದಿಯಲ್ಲಿ ನೆಗೆಟಿವ್ ಬಂದಿದೆ. 195 ಮಂದಿಯಲ್ಲಿ ಸೋಂಕು ದೃಢಗೊಂಡಿದ್ದು, 99 ಮಂದಿ ಚಿಕಿತ್ಸೆ ಮುಗಿಸಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 89 ಮಂದಿ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಇಂದು ಉಡುಪಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದು, ಒಟ್ಟು 45 ಪ್ರಕರಣಗಳು ದೃಢಪಟ್ಟಿದೆ. ಕಲಬುರಗಿ 99, ಯಾದಗಿರಿ 66, ಬೀದರ್ 48, ಬೆಂಗಳೂರು ನಗರ 18, ಬಳ್ಳಾರಿ 8, ಗದಗ 6, ಶಿವಮೊಗ್ಗ 4, ಧಾರವಾಡ 4, ಹಾಸನ-ದಕ್ಷಿಣ ಕನ್ನಡ ತಲಾ 3, ಬಾಗಲಕೋಟೆ 2, ಕೊಪ್ಪಳ-ರಾಮನಗರ ತಲಾ ಒಂದು ಪಾಸಿಟಿವ್ ಪ್ರಕರಣಗಳು ಕಂಡುಬಂದಿದೆ ಮೃತಪಟ್ಟ ಮೂವರೂ ಕೂಡಾ ಬೆಂಗಳೂರು ನಗರದವರಾಗಿದ್ದಾರೆ. 67 ವರ್ಷದ ಪುರುಷ, 48 ವರ್ಷದ ಮಹಿಳೆ ಹಾಗೂ 65 ವರ್ಷದ ಮಹಿಳೆ ಮೃತಪಟ್ಟಿದ್ದಾರೆ.