ಬಂಟ್ವಾಳ

ಕೊರೊನಾ ಮಾತ್ರವಲ್ಲ, ಮಲೇರಿಯಾದ ಕುರಿತೂ ಎಚ್ಚರ ಇರಲಿ

ಜಾಹೀರಾತು

ಸಾಂಕ್ರಾಮಿಕ ರೋಗಗಳ ತಡೆಗೆ ಜಾಗೃತಿಯೊಂದೇ ಪ್ರಬಲವಾದ ಮದ್ದು ಎಂದು  ಆರೋಗ್ಯ ಇಲಾಖೆಯ ನಿವೃತ್ತ ಅಧಿಕಾರಿ ಜಯರಾಮ್ ಪೂಜಾರಿ ಹೇಳಿದರು.

ದ.ಕ. ಜಿಲ್ಲಾ ಪಂಚಾಯತ್, ಪ್ರಾಥಮಿಕ ಆರೋಗ್ಯ ಕೇಂದ್ರ ಕಲ್ಲಡ್ಕ -ಬಾಳ್ತಿಲ ಹಾಗೂ ನರಿಕೊಂಬು ಗ್ರಾಮ ಪಂಚಾಯತ್  ನ ಆಶ್ರಯದಲ್ಲಿ ನರಿಕೊಂಬು ವೀರಮಾರುತಿ ಭಜನಾಮಂದಿರದ‌ ಬಳಿಯಲ್ಲಿ  ಸೋಮವಾರ ನಡೆದ ಮಲೇರಿಯಾ ಮಾಸಾಚರಣೆಯ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾಹಿತಿ ನೀಡುತ್ತಿದ್ದರು.

ಜಾಹೀರಾತು

ಮಳೆಗಾಲದಲ್ಲಿ ಸೊಳ್ಳೆಗಳಿಂದಾಗಿ ಮಲೇರಿಯಾ ಹಾಗೂ ಡೆಂಗ್ಯೂ ರೋಗ ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿಡುವ ಮೂಲಕ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದಾಗಿದೆ ಎಂದರು. ಸಾಂಕ್ರಾಮಿಕ ರೋಗಗಳ ವಿರುದ್ದ  ಸ್ವಚ್ಛತೆಯೊಂದಿಗೆ ಹೋರಾಡಬೇಕು, ಸಣ್ಣ ಪುಟ್ಟ ಜ್ವರ ಬಂದಾಗ ನಿರ್ಲಕ್ಷ್ಯ ಮಾಡದೆ  ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಕ್ತಪರೀಕ್ಷೆ  ಮಾಡಿಕೊಂಡು ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದರು.

ಕಾರ್ಯಕ್ರಮವನ್ನು ಸಂಯೋಜಿಸಿದ್ದ ಕಲ್ಲಡ್ಕ ಬಾಳ್ತಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕ ವೀರೇಶ್ ಮಾತನಾಡಿ, ಆರೋಗ್ಯ ಇಲಾಖೆ ನೀಡುವ ಸೂಚನೆಗಳನ್ನು ಪಾಲಿಸುವುದರ ಜೊತೆಯಲ್ಲಿ ಪ್ರತಿಯೊಬ್ಬರೂ ಸ್ವಯಂ ಜಾಗೃತಿಯನ್ನು ಹೊಂದುವಂತೆ ಕರೆ ನೀಡಿದರು.

ನರಿಕೊಂಬು ಗ್ರಾಮ ಪಂಚಾಯಿತಿ ಅಧ್ಯಕ್ಷ ಯಶೋಧರ ಕರ್ಬೆಟ್ಟು, ತಾಲೂಕು ಪಂಚಾಯತ್ ಸದಸ್ಯೆ ಗಾಯತ್ರಿ ರವೀಂದ್ರ ಸಪಲ್ಯ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಜಾಥಾಕ್ಕೆ ಚಾಲನೆ ನೀಡಿದರು. ಗ್ರಾಮ ಪಂಚಾಯತ್ ಸದಸ್ಯರಾದ ಕಿಶೋರ್ ಶೆಟ್ಟಿ, ದಿವಾಕರ ಶಂಭೂರು, ವೀರಮಾರುತಿ ಯುವಕ ಸಂಘದ ಮಾಜಿ ಅಧ್ಯಕ್ಷ ಚಂದ್ರಹಾಸ, ಕಲ್ಲಡ್ಕ ಬಾಳ್ತಿಲ ಪ್ರಾ.ಆರೋಗ್ಯ ಕೇಂದ್ರದ ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಮರಿಯಾ ಕುಟ್ಟಿ ಉಪಸ್ಥಿತರಿದ್ದರು. ಜಾಥಾದಲ್ಲಿ ಭಾಗವಹಿಸಿದ್ದ ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀಶಕ್ತಿ , ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವೀರಮಾರುತಿ ಯುವಕ ಸಂಘದ ಸದಸ್ಯರು ಮನೆಭೇಟಿ ನಡೆಸುವ ಮೂಲಕ ಮಲೇರಿಯಾ ಕುರಿತು ಮಾಹಿತಿಯೊಂದಿಗೆ ಜಾಗೃತಿ ಮೂಡಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ