ಜಿಲ್ಲಾ ಸುದ್ದಿ

ಜಿಲ್ಲಾ ಪೌರರಕ್ಷಣಾ ಪಡೆಯ ಚೀಫ್ ವಾರ್ಡನ್ ಆಗಿ ಡಾ. ಚೂಂತಾರು ನೇಮಕ

ಹೊಸದಾಗಿ ಆರಂಭವಾಗಲಿರುವ ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆಯ ಚೀಫ್ ವಾರ್ಡನ್ (ಮುಖ್ಯಪಾಲಕ) ಆಗಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ. ಮುರಲೀ ಮೋಹನ ಚೂಂತಾರು ಅವರನ್ನು ಮೂರು ವರ್ಷಗಳ ಅವಧಿಗೆ ನೇಮಕ ಮಾಡಿ ಆರಕ್ಷಕ ಮಹಾ ನಿರ್ದೇಶಕರು ಹಾಗೂ ಗೃಹರಕ್ಷಕ ದಳ ಮತ್ತು ಪೌರರಕ್ಷಣೆ ಮಹಾ ಸಮಾದೇಷ್ಟರು, ಕರ್ನಾಟಕ ರಾಜ್ಯ, ಬೆಂಗಳೂರು ಆದೇಶ ನೀಡಿರುತ್ತಾರೆ.

ಜಾಹೀರಾತು

ದ.ಕ. ಜಿಲ್ಲೆಯಲ್ಲಿ ಪೌರರಕ್ಷಣಾ ತಂಡವನ್ನು ರಚಿಸಿ, ತರಬೇತಿ ನೀಡಿ ಸಾರ್ವಜನಿಕ ಆಸ್ತಿಪಾಸ್ತಿ ಮತ್ತು ಜನರ ರಕ್ಷಣೆಗೆ ಪೂರಕವಾದ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವ ಹೊಣೆಗಾರಿಕೆಯನ್ನು ಪೌರರಕ್ಷಣಾ ದಳದ ಮುಖ್ಯ ಪಾಲಕರಿಗೆ ನೀಡಲಾಗಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.