ದಕ್ಷಿಣ ಕನ್ನಡ ಜಿಲ್ಲೆಯ 23 ಮಂದಿ ಸೇರಿದಂತೆ ರಾಜ್ಯದಲ್ಲಿ ಇಂದು ಮತ್ತೆ 164 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 5921 ಆಗಿದೆ. ಇವುಗಳ ಪೈಕಿ ಇಂದು 2 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 66 ಆಗಿದೆ. ಇಂದು 161 ಪ್ರಕರಣಗಳು ಪತ್ತೆಯಾಗಿದ್ದರ ಪೈಕಿ 91 ಮಂದಿ ಅಂತಾರಾಜ್ಯ ಪ್ರಯಾಣಿಕರಾದರೆ, 24 ಮಂದಿ ಅಂತಾರಾಷ್ಟ್ರೀಯ ಪ್ರಯಾಣಿಕರು. ಒಟ್ಟು ಆಸ್ಪತ್ರೆಯಿಂದ 2605 ಮಂದಿ ಬಿಡುಗಡೆ ಹೊಂದಿದ್ದಾರೆ. 3248 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.
ಜಾಹೀರಾತು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇವತ್ತು 23 ಮಂದಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 210 ಆಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಮಂದಿ ಬಿಡುಗಡೆ ಹೊಂದಿದ್ದು, 85 ಮಂದಿ ಗುಣಮುಖರಾದಂತಾಗಿದೆ. 118 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಡುಪಿಯಲ್ಲಿ ಇಂದು ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಆದರೂ 947 ಪ್ರಕರಣಗಳ ಒಟ್ಟು ಸಂಖ್ಯೆ ಹಿನ್ನೆಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾದ ಜಿಲ್ಲೆಯಾಗಿ ಈಗಲೂ ಉಡುಪಿ ಇದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ರಾಜ್ಯದಲ್ಲಿ 6 ಸಾವಿರದ ಸನಿಹಕ್ಕೆ ತಲುಪಿದ ಕೊರೊನಾ ಸೋಂಕಿತರ ಸಂಖ್ಯೆ"
Be the first to comment on "ರಾಜ್ಯದಲ್ಲಿ 6 ಸಾವಿರದ ಸನಿಹಕ್ಕೆ ತಲುಪಿದ ಕೊರೊನಾ ಸೋಂಕಿತರ ಸಂಖ್ಯೆ"