ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಯುಕ್ತ ಕಾರ್ಮಿಕ ಇಲಾಖೆಯ ವತಿಯಿಂದ ಜನಜಾಗೃತಿ ಜಾಥಾಕ್ಕೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಅವರು ಶುಕ್ರವಾರ ಬಿ.ಸಿ.ರೋಡಿನ ಮಿನಿ ವಿಧಾನಸೌಧದ ಆವರಣದಲ್ಲಿ ಚಾಲನೆ ನೀಡಿದರು. ಬಂಟ್ವಾಳ ಕಾರ್ಮಿಕರ ಇಲಾಖೆಯ ಕಾರ್ಮಿಕ ನಿರೀಕ್ಷಕಿ ಮೆರ್ಲಿನ್ ಗ್ರೇಸಿ ಅವರು ಮಾಹಿತಿ ನೀಡಿದರು. ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿ ಬಾಯಿ ಎಚ್, ಪೋಲಿಸ್ ಎಎಸ್‌ಐ ಜಯರಾಮ ರೈ, ಕಂದಾಯ, ಕಾರ್ಮಿಕ, ಶಿಕ್ಷಣ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…