ಪೊಳಲಿ ಶ್ರೀ ರಾಮಕೃಷ್ಣ ತಪೋವನ ಸಭಾಂಗಣದಲ್ಲಿ ಪೊಳಲಿ ಸರ್ಕಾರಿ ಪ್ರೌಢಶಾಲಾ ಪೋಷಕರ ಸಮಾಲೋಚನಾ ಸಭೆ ನಡೆಯಿತು. ಕೋವಿಡ್ ಹಿನ್ನೆಲೆಯಲ್ಲಿ ಶಾಲೆ ಪುನಾರಂಭಿಸುವ ಕುರಿತು ಅಭಿಪ್ರಾಯ ಸಂಗ್ರಹಣೆ ಹಿನ್ನೆಲೆಯಲ್ಲಿ ಸಭೆ ಕರೆಯಲಾಗಿತ್ತು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ವೆಂಕಟೇಶ ನಾವುಡ, ತಾಲೂಕು ಪಂಚಾಯತ್ ಸದಸ್ಯ ಯಶವಂತ ಪೂಜಾರಿ, ತಪೋವನದ ಅಧ್ಯಕ್ಷರಾದ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ, ಆಶಾ ಕಾರ್ಯಕರ್ತೆರಾದ ಮುತ್ತಮ್ಮ, ಸುಮತಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು. ಕೆಲವು ಪೋಷಕರು ಈ ವರ್ಷ ಶಾಲೆ ಬೇಡ ಎಂದರೆ ಕೆಲವರು ಆಗಸ್ಟ್ 15ರ ಬಳಿಕ ಪ್ರಾರಂಭಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು. ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಹದಿನೈದರ ಬಳಿಕ ಶಾಲೆ ಪ್ರಾರಂಭಿಸುವುದು ಸೂಕ್ತ, ದಿನ ಬಿಟ್ಟು ದಿನ ತರಗತಿಗಳನ್ನು ನಡೆಸುವುದು ಉತ್ತಮ ಎಂಬ ಅಭಿಪ್ರಾಯಕ್ಕೆ ಬರಲಾಯಿತು. ಆಶಾ ಕಾರ್ಯಕರ್ತರಿಗೆ ಪುಷ್ಪ ನೀಡಿ ಗೌರವಿಸಲಾಯಿತು. ಮುಖ್ಯ ಶಿಕ್ಷಕ ರಾಧಾಕೃಷ್ಣ ಭಟ್ ಸ್ವಾಗತಿಸಿದರು. ಹಿರಿಯ ಶಿಕ್ಷಕ ಸಿಪ್ರಿಯನ್ ಡಿಸೋಜಾ ವಂದಿಸಿದರು.
Be the first to comment on "ಶಾಲೆ ಆರಂಭ: ಪೊಳಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಮಾಲೋಚನಾ ಸಭೆ"