ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಜೀಪನಡು ಗ್ರಾಮದ ಕಂಚಿನಡ್ಕ ಪದವು ಎಂಬಲ್ಲಿರುವ ಧಾರ್ಮಿಕ ಸ್ಥಳದಲ್ಲಿ ಧಾರ್ಮಿಕ ನಂಬಿಕೆಗೆ ಘಾಸಿಯಾಗುವಂತ ಕೃತ್ಯವೆಸಗಿ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಟಿಕ್ ಟಾಕ್ ವಿಡಿಯೋ ಹರಿಬಿಟ್ಟಿರುವ ಆರೋಪದಲ್ಲಿ ನಾಲ್ವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಎಸ್.ಐ. ಪ್ರಸನ್ನ ನೇತೃತ್ವದ ತಂಡ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಕಲಂ 295 [ಎ], 297, 427 ಜೊತೆಗೆ 34 ಐ.ಪಿ.ಸಿ ರಂತೆ ಪ್ರಕರಣ ದಾಖಲಾಲಿಸಿಕೊಂಡು ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಕೃತ್ಯ ವೆಸಗಿದ ಆರೋಪಿಗಳಾದ ಸಜೀಪನಡು ಗ್ರಾಮದ ಮೊಹಮ್ಮದ್ ಮಸೂದ್ [20], ಮೊಹಮ್ಮದ್ ಅಜೀಮ್ [20], ಅಬ್ದುಲ್ ಲತೀಫ್ [20], ಮೊಹಮ್ಮದ್ ಅರ್ಫಾಜ್ [20] ರವರನ್ನು ವಶಕ್ಕೆ ಪಡೆದಿರುತ್ತಾರೆ.