ಬಂಟ್ವಾಳ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಮಾಣಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಶನಿವಾರ ಬೆಳಗ್ಗೆ ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಯಿತು. ಮಾಣಿ ಸಮೀಪ ಪಳಿಕೆ ಎಂಬಲ್ಲಿ ಮರದ ಬುಡವೊಂದರಲ್ಲಿ ಯುವಕನೋರ್ವನ ಮೃತದೇಹ ಕಂಡುಬಂದಿದೆ. ಮರಕ್ಕೆ ನೇಣು ಬಿಗಿದು ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳೀಯರು ಇದನ್ನು ಗಮನಿಸಿ ವಿಟ್ಲ ಠಾಣಾ ಪೊಲೀಸರ ಗಮನಕ್ಕೆ ತಂದಿದ್ದು, ಮೃತದೇಹವನ್ನು ಮಹಜರು ಮಾಡಲಾಯಿತು. ಮರದಲ್ಲಿ ಮೃತನ ಪ್ಯಾಂಟ್ ನೇತಾಡುತ್ತಿದ್ದುದು ಕಂಡುಬಂದಿದ್ದು, ಈತ ಪ್ಯಾಂಟನ್ನೇ ನೇಣಾಗಿ ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇದುವರೆಗೆ ಮೃತನ ಹೆಸರು, ವಿಳಾಸ ತಿಳಿದುಬಂದಿಲ್ಲ
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)