ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ವತಿಯಿಂದ ಬಂಟ್ವಾಳ ತಾಲೂಕಿನ 352 ಆಶಾ ಕಾರ್ಯಕರ್ತೆಯರಿಗೆ ನಂದಿನಿ ಉತ್ಪನ್ನಗಳ ಕಿಟ್ ಅನ್ನು ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘದಲ್ಲಿ ವಿತರಿಸಲಾಯಿತು.
ಅಧ್ಯಕ್ಷತೆಯನ್ನು ಕಲ್ಲಡ್ಕ ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷ, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದ.ಕ.ಹಾಲು ಒಕ್ಕೂಟದ ನಿರ್ದೇಶಕ ಬಿ.ಸುಧಾಕರ ರೈ ಬೋಳಂತೂರು, ಸವಿತಾ ಎನ್ ಶೆಟ್ಟಿ ಭಾಗವಹಿಸಿದ್ದರು. ದ.ಕ.ಹಾಲು ಒಕ್ಕೂಟದ ಉಪವ್ಯವಸ್ಥಾಪಕ ಎಸ್ ಪ್ರಭಾಕರ್, ವಿಸ್ತರಣಾಧಿಕಾರಿಗಳಾದ ದೇವರಾಜ್ ಎಸ್.ಎನ್, ಜಗದೀಶ ಎ, ಸರೋಜಿನಿ, ಮಾರುಕಟ್ಟೆ ಅಧೀಕ್ಷರಾದ ರವಿ, ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಶ್ ಭಾಗವಹಿಸಿದ್ದರು. ದ.ಕ.ಹಾಲು ಒಕ್ಕೂಟದ ನಿರ್ದೇಶಕ ಬಿ.ಸುಧಾಕರ ರೈ ಬೋಳಂತೂರು ಸ್ವಾಗತಿಸಿದರು. ಕಲ್ಲಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…