ಬಿ.ಸಿ.ರೋಡಿನ ಸರ್ಕಲ್ ಬಳಿ ಮಂಗಳವಾರ ರಾತ್ರಿ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಸ್ಕೂಟರ್ ಸವಾರ ರಿತೇಶ್ (30) ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರು ಪೂಂಜರಕೋಡಿ ನಿವಾಸಿಯಾಗಿದ್ದಾರೆ. ರಾತ್ರಿ ವೇಳೆ ಅಪಘಾತ ನಡೆದಿದ್ದು ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ತಲೆಗೆ ಗಂಭೀರವಾದ ಏಟಾದ ಕಾರಣ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ರಾಜೇಶ್ ಮತ್ತು ಸಿಬ್ಬಂದಿ ಗಳು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…