ಬಂಟ್ವಾಳ

ನಾಳೆ ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್ ಹುಟ್ಟೂರಿಗೆ ಆಗಮನ

ಜೂ.15 ರಂದು ಸೋಮವಾರ ಬೆಂಗಳೂರಿನ ಕಿಯೋನಿಕ್ಸ್ ಕಚೇರಿಯಲ್ಲಿ ಗಣ್ಯರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿರುವ ಹರಿಕೃಷ್ಣ ಬಂಟ್ವಾಳ ಅವರು ನಾಳೆ ( ಜೂ.17, ಬುಧವಾರ) ಊರಿಗೆ ಆಗಮಿಸಲಿದ್ದಾರೆ.‌

ಜಾಹೀರಾತು

ಮೊದಲಿಗೆ ಬಂಟ್ವಾಳ ಗಾಣದಪಡ್ಪುವಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರನ್ನು ಹಾಗೂ ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿಯವರನ್ನು, ಪಕ್ಷ ಪ್ರಮುಖರು ಹಾಗೂ ಕಾರ್ಯಕರ್ತರನ್ನು ಬಿ.ಸಿ.ರೋಡಿನ ಪಕ್ಷದ ಕಚೇರಿಯಲ್ಲಿ ಭೇಟಿಯಾಗಲಿದ್ದಾರೆ. ಬಳಿಕ ಮಂಗಳೂರಿನ ಕಂಕನಾಡಿ ಗರಡಿ ಕ್ಷೇತ್ರ, ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡುವರು. ಬಳಿಕ  ಜಿಲ್ಲಾ ಬಿಜೆಪಿ ಕಚೇರಿ ಹಾಗೂ ಸಂಘನಿಕೇತನಕ್ಕೂ ಭೇಟಿ ನೀಡಲಿರುವರು

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ