ಅವಿವಾಹಿತ ಅಣ್ಣ- ತಂಗಿ ಇಬ್ಬರು ಪೆಟ್ರೋಲ್ ಸುರಿದುಕೊಂಡು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ತಾಲೂಕಿನ ಸಂಗಬೆಟ್ಟುವಿನಲ್ಲಿ ಸಂಭವಿಸಿದೆ. ಇಲ್ಲಿನ ನಿವಾಸಿಗಳಾದ ನೀಲಯ್ಯ ಶೆಟ್ಟಿ ಗಾರ್(42) , ಕೇಸರಿ ( 39) ಮೃತಪಟ್ಟ ದುರ್ದೈವಿಗಳು.
ಇಬ್ಬರೂ ಅನಾರೋಗ್ಯ ದಿಂದ ಬಳಲುತ್ತಿದ್ದು, ರಾತ್ರಿ ಸುಮಾರು 11 ಗಂಟೆಯ ಬಳಿಕ ತಮ್ಮ ಮನೆಯ ಕೊಠಡಿಯಲ್ಲಿ ಕೃತ್ಯ ಗೈದಿದ್ದಾರೆ ಎಂದು ಶಂಕಿಸಲಾಗಿದೆ. ಮನೆಯಲ್ಲಿ ನೀಲಯ್ಯ ಅವರ ಸಹೋದರ ಮತ್ತು ಅವರ ಪತ್ನಿ, ಮಗ ವಾಸವಿದ್ದು, ಮತ್ತೊಂದು ಕೊಠಡಿಯಲ್ಲಿ ಮಲಗಿದ್ದರು. ನರಳಾಟದ ಶಬ್ದ ಕೇಳಿ ಬಂದಾಗ ಘಟನೆ ತಿಳಿದು ಬಂದಿತ್ತು.
| ಪುರಸಭಾ ವ್ಯಾಪ್ತಿಯ ಜನರಲ್ಲಿ ಸಹಕಾರಕ್ಕೆ ಪ್ರಾಜೆಕ್ಟ್ ಡೈರೆಕ್ಟರ್ ಸಂತೋಷ್ ಕುಮಾರ್ ಮನವಿ | ನೀರು ಶುದ್ಧೀಕರಣ ಘಟಕಕ್ಕೆ ಭೇಟಿ,…