ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ: ಮಾಜಿ ಸಚಿವ ರಮಾನಾಥ ರೈ ಅವರಿಂದ ವೀಕ್ಷಣೆ

 

ಜಾಹೀರಾತು

ನರಿಕೊಂಬು ಗ್ರಾಮದಲ್ಲಿ 18.29 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡು ಉದ್ಘಾಟನೆಗೆ ಸಜ್ಜಾಗಿರುವ ನರಿಕೊಂಬು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ಬಂಟ್ವಾಳ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರ ಉಪಸ್ಥಿತಿಯಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಯವರು ಮಂಗಳವಾರ ವೀಕ್ಷಿಸಿದರು. 

ಜಾಹೀರಾತು


ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ವಿ.ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾ.ಪಂ.ಸದಸ್ಯೆ ಗಾಯತ್ರಿ ರವೀಂದ್ರ, ಮಾಣಿ ಗ್ರಾ.ಪಂ.ಸದಸ್ಯ ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಪ್ರಕಾಶ ಕಾರಂತ, ಕೃಷ್ಣಪ್ಪ ಪೂಜಾರಿ, ಚಂದ್ರಶೇಖರ ಪೂಜಾರಿ, ಉಮೇಶ್ , ಅಲ್ಬರ್ಟ್, ಉಮೇಶ್ ನೆಲ್ಲಿಗುಡ್ಡೆ, ಮಾಧವ ಕರ್ಬೆಟ್ಟು, ಅಧಿಕಾರಿಗಳಾದ ಜಗದೀಶ್ ಮೊದಲಾದವರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರಿಕೊಂಬು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಿಂದ ನರಿಕೊಂಬು, ಶಂಭೂರು, ಬಾಳ್ತಿಲ, ಗೋಳ್ತಮಜಲು ಹಾಗೂ ಅಮ್ಟೂರು ಗ್ರಾಮಗಳ 38 ಜನವಸತಿ ಕೇಂದ್ರಗಳಿಗೆ ಕುಡಿಯುವ ನೀರು ಒದಗಲಿದೆ. ಕಳೆದ ಕೆಲವು ಸಮಯಗಳಿಂದ ಪ್ರಾಯೋಗಿಕವಾಗಿ ನೀರು ಸರಬರಾಜು ಮಾಡಲಾಗಿದ್ದು, ಯೋಜನೆ ಫಲಪ್ರದವಾಗುವುದರಲ್ಲಿ ಸಂದೇಹವಿಲ್ಲ ಎಂದರು.  ವಿವರಗಳಿಗೆ ವಿಡಿಯೋ ಕ್ಲಿಕ್ ಮಾಡಿರಿ

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ: ಮಾಜಿ ಸಚಿವ ರಮಾನಾಥ ರೈ ಅವರಿಂದ ವೀಕ್ಷಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*