ನರಿಕೊಂಬು ಗ್ರಾಮದಲ್ಲಿ 18.29 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡು ಉದ್ಘಾಟನೆಗೆ ಸಜ್ಜಾಗಿರುವ ನರಿಕೊಂಬು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ಬಂಟ್ವಾಳ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರ ಉಪಸ್ಥಿತಿಯಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಯವರು ಮಂಗಳವಾರ ವೀಕ್ಷಿಸಿದರು.
ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ವಿ.ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾ.ಪಂ.ಸದಸ್ಯೆ ಗಾಯತ್ರಿ ರವೀಂದ್ರ, ಮಾಣಿ ಗ್ರಾ.ಪಂ.ಸದಸ್ಯ ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಪ್ರಕಾಶ ಕಾರಂತ, ಕೃಷ್ಣಪ್ಪ ಪೂಜಾರಿ, ಚಂದ್ರಶೇಖರ ಪೂಜಾರಿ, ಉಮೇಶ್ , ಅಲ್ಬರ್ಟ್, ಉಮೇಶ್ ನೆಲ್ಲಿಗುಡ್ಡೆ, ಮಾಧವ ಕರ್ಬೆಟ್ಟು, ಅಧಿಕಾರಿಗಳಾದ ಜಗದೀಶ್ ಮೊದಲಾದವರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರಿಕೊಂಬು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಿಂದ ನರಿಕೊಂಬು, ಶಂಭೂರು, ಬಾಳ್ತಿಲ, ಗೋಳ್ತಮಜಲು ಹಾಗೂ ಅಮ್ಟೂರು ಗ್ರಾಮಗಳ 38 ಜನವಸತಿ ಕೇಂದ್ರಗಳಿಗೆ ಕುಡಿಯುವ ನೀರು ಒದಗಲಿದೆ. ಕಳೆದ ಕೆಲವು ಸಮಯಗಳಿಂದ ಪ್ರಾಯೋಗಿಕವಾಗಿ ನೀರು ಸರಬರಾಜು ಮಾಡಲಾಗಿದ್ದು, ಯೋಜನೆ ಫಲಪ್ರದವಾಗುವುದರಲ್ಲಿ ಸಂದೇಹವಿಲ್ಲ ಎಂದರು. ವಿವರಗಳಿಗೆ ವಿಡಿಯೋ ಕ್ಲಿಕ್ ಮಾಡಿರಿ