ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಿಯೋನಿಕ್ಸ್ ಘಟಕ ಸ್ಥಾಪಿಸುವ ಇರಾದೆಯಿದ್ದು, ನೂರಾರು ಮಂದಿಗೆ ಉದ್ಯೋಗಾವಕಾಶ ಇದರಿಂದ ಲಭಿಸಲಿದೆ ಎಂದು ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಹೇಳಿದ್ದಾರೆ.
ಕಿಯೋನಿಕ್ಸ್ ಅಧ್ಯಕ್ಷರಾಗಿ ಬುಧವಾರ ಮೊದಲ ಬಾರಿಗೆ ಬಂಟ್ವಾಳಕ್ಕೆ ಆಗಮಿಸಿದ ಸಂದರ್ಭ, ಬಿ.ಸಿ.ರೋಡಿನ ಬಿಜೆಪಿ ಕಚೇರಿಯಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲಾಯಿತು. ಬುಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳಾದ ಸತೀಶ್ ಕುಂಪಲ, ಜಯಶ್ರೀ ವೇದಿಕೆಯಲ್ಲಿದ್ದರು. ಬಂಟ್ವಾಳ ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಇದೇ ವೇಳೆ ಹರಿಕೃಷ್ಣ ಬಂಟ್ವಾಳ್ ಅವರನ್ನು ಪಕ್ಷದ ಪ್ರಮುಖರಾದ ಪ್ರಕಾಶ್ ಅಂಚನ್ , ವಜ್ರನಾಥ ಕಲ್ಲಡ್ಕ, ಗಣೇಶ್ ಸುವರ್ಣ ತುಂಬೆ, ಪ್ರಮೋದ್ ಅಜ್ಜಿಬೆಟ್ಟು, ಪ್ರಭಾಕರ ಪ್ರಭು, ರೊನಾಲ್ಡ್ ಡಿಸೋಜ, ರಮಾನಾಥ ರಾಯಿ, ರಾಜಾರಾಮ ನಾಯಕ್, ಯಶೋಧರ ಕರ್ಬೆಟ್ಟು, ಮೋನಪ್ಪ ದೇವಸ್ಯ, ಸುದರ್ಶನ ಬಜ ಸಹಿತ ಸೇರಿದ್ದ ಹಲವು ಕಾರ್ಯಕರ್ತರು, ಪ್ರಮುಖರುಅಭಿನಂದನೆ ಸಲ್ಲಿಸಿದರು.