ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಸಿದ್ಧತಾ ಕಾರ್ಯಗಳನ್ನು ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಸಂಗಬೆಟ್ಟು ಜಿಪಂ ಕ್ಷೇತ್ರದಲ್ಲಿ ಮಾಡಲಾಯಿತು.
ಅರಳ, ಅಮ್ಟಾಡಿ, ಸಂಗಬೆಟ್ಟು, ರಾಯಿ, ಪಂಜೀಕಲ್ಲು, ಪಿಲಾತ್ ಬೆಟ್ಟು, ಇರ್ವತ್ತೂರು, ಚೆನ್ನೈತೋಡಿ, ಕುಕ್ಕಿಪಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಸಭೆಗಳನ್ನು ನಡೆಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮ ಶೇಖರ ಜೈನ್, ಚಂದ್ರ ಪ್ರಕಾಶ್ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕುಲಾಲ್, ವಲಯ ಅಧ್ಯಕ್ಷರಾದ ಚಂದ್ರಶೇಖರ ಶೆಟ್ಟಿ, ವಲೇರಿಯನ್, ದಿನೇಶ್ ಶೆಟ್ಟಿಗಾರ್, ಸುಧೀರ್ ಶೆಟ್ಟಿ, ಸದಾನಂದ ಶೆಟ್ಟಿ, ಪ್ರಶಾಂತ್ ಜೈನ್, ನವೀನ್ ಶೆಟ್ಟಿ, ಸುರೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…