ಶನಿವಾರ 2 ಕೋ.ರೂ. ವೆಚ್ಚದ ನೇರಳಕಟ್ಟೆ-ನಯನಾಡು-ವೇಣೂರು ರಸ್ತೆ ಅಭಿವೃದ್ದಿ ಕಾಮಗಾರಿಗೆ ಶಾಸಕ ರಾಜೇಶ್ ನಾಯ್ಕ್ ಶಿಲಾನ್ಯಾಸ ನೆರವೇರಿಸಿದರು.
ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ಒಂದು ಬಾರಿ ಅಭಿವೃದ್ದಿ ಯೋಜನೆಯಲ್ಲಿ 2 ಕೋಟಿ ರೂ. ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ನೇರಳಕಟ್ಟೆ ಜಂಕ್ಷನ್‌ನಲ್ಲಿ ಶಿಲಾನ್ಯಾಸ ಶನಿವಾರ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ, ತಾ.ಪಂ.ಸದಸ್ಯ ರಮೇಶ್ ಕುಡ್ಮೇರು, ಪಿಲಾತಬೆಟ್ಟು ಗ್ರಾ.ಪಂ. ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಉಪಾಧ್ಯಕ್ಷೆ ಲಕ್ಷ್ಮಿ ಜೆ.ಬಂಗೇರ, ಸದಸ್ಯರಾದ ಲಕ್ಷ್ಮೀ ನಾರಾಯಣ ಹೆಗ್ಡೆ, ಸರೋಜಾ ಡಿ. ಶೆಟ್ಟಿ, ಪಿಡಿಒ ರಾಜಶೇಖರ ರೈ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಇಲಾಖೆ ಕಾರ್ಯ ನಿರ್ವಾಹಕ ಅಭಿಯಂತರ ಷಣ್ಮುಗಂ, ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಅಮೃತ್ ಕುಮಾರ್, ಗುತ್ತಿಗೆದಾರ ಸಂತೋಷ್ ಶೆಟ್ಟಿ, ಪ್ರಮುಖರಾದ ಸುದರ್ಶನ್ ಬಜ, ರವಿ ಶಂಕರ ಹೊಳ್ಳ, ಸುಚೀಂದ್ರ ಶರ್ಮ ಕಯ್ಯಬೆ, ಮಿಥುನ್ ಪ್ರಭು, ಹರೀಶ್ ಶೆಟ್ಟಿ, ದಯಾನಂದ ಎಡ್ತೂರು,ಉಮೇಶ್ ಪೂಜಾರಿ, ಸಂತೋಷ್ ಕುಮಾರ್ ಶೆಟ್ಟಿ, ಜಯ ಶೆಟ್ಟಿ ನೆಕ್ಕಿತರವು, ಪುಷ್ಪರಾಜ ಶೆಟ್ಟಿ ಮತ್ತಿತರರಿದ್ದರು.
Be the first to comment on "2 ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ"