ಜಲಜೀವನ್ ಮಿಷನ್ ಯೋಜನೆಯಡಿ ಮನೆಗಳಿಗೆ ಕಾರ್ಯಾತ್ಮಕ ನಳ್ಳಿ ನೀರು ಸಂಪರ್ಕದ ಬಗ್ಗೆ ಬಂಟ್ವಾಳ ತಾ.ಪಂ.ಸಭಾಂಗಣದಲ್ಲಿ ದ.ಕ.ಜಿ.ಪಂ ಕಾರ್ಯನಿರ್ವಹಣಾಧಿಕಾರಿ ಡಾ.ಸೆಲ್ವಮಣಿ ಉಪಸ್ಥಿತಿಯಲ್ಲಿ ಮಾಹಿತಿ ಕಾರ್ಯಾಗಾರ ನಡೆಯಿತು.
ಕಾರ್ಯಪಾಲಕ ಅಭಿಯಂತರ ನರೇಂದ್ರ ಬಾಬು, ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಸಹಾಯಕ ಕಾರ್ಯಪಾಲಕ ಅಭಿಯಂತರ ಮಹೇಶ್ , ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು. ಇದೇ ವೇಳೆ ದ.ಕ.ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆಯ ವತಿಯಿಂದ ಬಂಟ್ವಾಳ ತಾ.ಪಂ.ಎಲ್ಲಾ ಗ್ರಾ.ಪಂ.ಸಿಬ್ಬಂದಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಕೋವಿಡ್ 19ರ ಬಗ್ಗೆ ರೋಗ ನಿರೋಧಕ ಹೋಮಿಯೋಪತಿ ಮಾತ್ರೆಗಳನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸೆಲ್ವಮಣಿ ವಿತರಿಸಿದರು .ಆಯುಷ್ ವೈದ್ಯಾಧಿಕಾರಿ ಡಾ.ಮಣಿಕರ್ಣಿಕ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ಕಾರ್ಯ ಪಾಲಕ ಅಭಿಯಂತರರಾದ ನರೇಂದ್ರ ಬಾಬು, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.
(more…)
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…