ಬಂಟ್ವಾಳ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ವಿರುದ್ಧ ಬೃಹತ್ ಪ್ರತಿಭಟನಾ ಪಾದಯಾತ್ರೆ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಜೂನ್ 29ರಂದು ಬಿ.ಸಿ.ರೋಡಿನಲ್ಲಿ ಬೆಳಗ್ಗೆ ನಡೆಯಲಿದೆ. ಪೊಳಲಿ ದ್ವಾರದಿಂದ ಬಿ.ಸಿ.ರೋಡ್ ಜಂಕ್ಷನ್ ವರೆಗೆ ಪಾದಯಾತ್ರೆ ನಡೆಯಲಿರುವುದಾಗಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಮತ್ತು ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.