PHOTO AND VIDEO
ಎಸ್.ಎಸ್.ಎಲ್.ಸಿ. ಪರೀಕ್ಷೆಯ ಮೊದಲ ದಿನವಾದ ಗುರುವಾರ ಬಂಟ್ವಾಳ ತಾಲೂಕಿನ 17 ಪರೀಕ್ಷಾ ಕೇಂದ್ರಗಳಲ್ಲಿ ಯಶಸ್ವಿಯಾಗಿ ಪರೀಕ್ಷೆ ನಡೆದಿದ್ದು, ಒಟ್ಟು 4861 ಮಂದಿ ಪರೀಕ್ಷೆ ಬರೆದಿದ್ದಾರೆ ದ್ವಿತೀಯ ಭಾಷೆ (ಇಂಗ್ಲೀಷ್/ಕನ್ನಡ) ಪರೀಕ್ಷೆ ನಡೆದಿತ್ತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬಂಟ್ವಾಳ ಎಸ್ವಿಎಸ್ ದೇವಳ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಮುನ್ನೆಚ್ಚರಿಕಾ ವ್ಯವಸ್ಥೆಯ ಕುರಿತು ಪರಿಶೀಲಿಸಿ, ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ಅವರು ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳ ಕುರಿತು ಪರಿಶೀಲಿಸಿದರು.