ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿರುವ ಬಿ.ಸಿ.ರೋಡ್ ನಿಂದ ಜಕ್ರಿಬೆಟ್ಟುವರೆಗಿನ ಭಾಗದಲ್ಲಿ ಜೂನ್ 26ರಿಂದ ಜುಲೈ 18ರವರೆಗೆ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಆದೇಶ ಹೊರಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 73 (ಹಳೆ ರಾಷ್ಟ್ರೀಯ ಹೆದ್ದಾರಿ 234) ಬಿ.ಸಿ.ರೋಡ್ ನಿಂದ ಪುಂಜಾಲಕಟ್ಟೆವರೆಗೆ ಚತುಷ್ಪಥ ಮತ್ತು ದ್ವಿಪಥ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಪ್ರಥಮ ಹಂತದಲ್ಲಿ ಬಿ.ಸಿ.ರೋಡ್ ಜಕ್ರಿಬೆಟ್ಟು ಚತುಷ್ಪಥ ಕಾಂಕ್ರೀಟ್ ಕಾಮಗಾರಿ ರಸ್ತೆಯ ಒಂದು ಬದಿ 7 ಮೀ. ಅಗಲಕ್ಕೆ ಕೈಗೆತ್ತಿಕೊಳ್ಳಲಾಗಿದೆ. ಇದರಲ್ಲಿ 2.4 ಕಿ.ಮೀ. ಆಗಲೇ ಮುಕ್ತಾಯಗೊಂಡಿದ್ದು, 1.5 ಕಿ.ಮೀ. ಕಾಮಗಾರಿ ಪ್ರಗತಿಯಲ್ಲಿದೆ. 3.9 ಕಿ.ಮೀ. ಕಾಂಕ್ರೀಟ್ ರಸ್ತೆಯ ಕ್ಯೂರಿಂಗ್ ಮಾಡಲು ಬಿ.ಸಿ.ರೋಡಿನಿಂದ ಜಕ್ರಿಬೆಟ್ಟುವರೆಗೆ ವಾಹನ ಸಂಚಾರ ಸ್ಥಗಿತಗೊಳಿಸುವುದು ಅನಿವಾರ್ಯವಾಗಿದೆ. ಈ ಭಾಗದಲ್ಲಿ ಕಾಂಕ್ರೀಟೀಕರಣಗೊಳಿಸಲು ಜುಲೈ 18ರವರೆಗೆ ಒಟ್ಟು 31 ದಿನಗಳ ಅವಧಿಯಲ್ಲಿ ರಸ್ತೆ ಮೂಲಕ ವಾಹನ ಸಂಚಾರವನ್ನು ನಿಷೇಧಿಸಲು ಜಿಲ್ಲಾಧಿಕಾರಿಗೆ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಈ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಿದ್ದರು.
ಮಂಗಳೂರು – ಪುಂಜಾಲಕಟ್ಟೆ ಕಡೆ ಓಡಾಡುವ ಲಘು ವಾಹನಗಳಾದ ಕಾರು ಜೀಪು , ಮಿನಿ ವ್ಯಾನ್ ದ್ವಿಚಕ್ರವಾಹನ , ಅಂಬ್ಯುಲೆನ್ಸ್ ವಾಹನಗಳು ಬದಲಿ ರಸ್ತೆಯಾದ ಮಂಗಳೂರು, ಬಿ.ಸಿ ರೋಡು, ಬಂಟ್ವಾಳ ಪೇಟೆ – ಜಕ್ರಿಬೆಟ್ಟು ಬಳಸುವಂತೆ ಹಾಗೂ ಮೂಡುಬಿದ್ರೆ ಬಂಟ್ವಾಳ ಬಿ.ಸಿ ರೋಡ್ ಕಡೆಗೆ ಸಂಚರಿಸುವ ವಾಹನ ಬದಲಿ ರಸ್ತೆಯಾದ ಮೂಡುಬಿದ್ರೆ ಬಂಟ್ವಾಳ ಜಂಕ್ಷನ್ ರಾ. ಹೆ -234 ಮುಖಾಂತರ ಜಕ್ರಿಬೆಟ್ಟು – ಬಂಟ್ವಾಳ ಪೇಟೆ – ಬಿ.ಸಿ ರೋಡ್ ಕಡೆಗೆ ಚಲಿಸುವಂತೆ ಆದೇಶದಲ್ಲಿ ತಿಳಿಸಿಲಾಗಿದೆ. ಮಂಗಳೂರು – ಗುರುವಾಯನಕೆರೆ ಕಡೆಗೆ ಸಾರ್ವಜನಿಕ ಹಿತದೃಷ್ಟಿಯಿಂದ ದಿನನಿತ್ಯ ಸಂಚರಿಸುವ ಸಾರ್ವಜನಿಕ ಬಸ್ಸುಗಳಿಗೆ ರಾಷ್ಟ್ರೀಯ ಹೆದ್ದಾರಿ 234 ಬಳಸುವಂತೆ, ಅಂದರೆ ಮಂಗಳೂರು – ಬಿ.ಸಿ ರೋಡ್ ಉಪ್ಪಿನಂಗಡಿ ಮುಖಾಂತರ ಕರಾಯ ಕಲ್ಲೇರಿ ಗುರುವಾಯನಕೆರೆ ಬದಲಿ ಮಾರ್ಗ ಹಾಗೂ ಗುರುವಾಯನಕೆರೆಯಿಂದ ಮಂಗಳೂರಿಗೆ ಬರುವ ಬಸ್ಸುಗಳು ಗುರುವಾಯನಕೆರೆ ಮುಖಾಂತರ ಕಲ್ಲೇರಿ – ಕರಾಯ ಉಪ್ಪಿನಂಗಡಿ ಮಾಣಿ ಬಿ.ಸಿ ರೋಡ್ ಮಂಗಳೂರು ಬಳಸುವಂತೆ ಆದೇಶದಲ್ಲಿ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಟ್ಯಾಂಕರ್ಸ್ , ಶಿಪ್ ಕಾರ್ಗೋ ಕಂಟೆನರ್ಸ್ , ಹೆವಿ ಕಮರ್ಷಿಯಲ್ ವೆಹಿಕಲ್ ಮಲ್ಟಿ ಎಕ್ಸೆಲ್ ಟ್ರಕ್ಸ್, ರಾಜಹಂಸ ಮುಂತಾದ ಘನ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…